ಬೆಂಗಳೂರು, ಆ.13 (DaijiworldNews/HR): ಕೊರೋನಾ 3ನೇ ಅಲೆಯ ಭೀತಿಯ ನಡುವೆಯೂ ಶುಕ್ರವಾರ ಕರ್ನಾಟಕದಲ್ಲಿ ಕೊರೊನಾ ಸೋಂಕು ಇಳಿಕೆ ಕಂಡಿದ್ದು, ಹೊಸದಾಗಿ 1669 ಮಂದಿಗೆ ದೃಢಪಟ್ಟಿದ್ದು, ಸೋಂಕಿನಿಂದಾಗಿ 22 ಜನರು ಸಾವನ್ನಪ್ಪಿದ್ದಾರೆ.
ಸಾಂಧರ್ಭಿಕ ಚಿತ್ರ
ಈ ಕುರಿತು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 1,69,332 ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರಲ್ಲಿ 1,669 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಇನ್ನು ಇಂದು 1,672 ಜನರು ಗುಣಮುಖರಾಗಿದ್ದು, ರಾಜ್ಯಾಧ್ಯಂತ 22,703 ಸಕ್ರೀಯ ಸೋಂಕಿತರು ದ್ದು, ಬೆಂಗಳೂರಿನಲ್ಲಿ ಐವರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 22 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.