ನವದೆಹಲಿ, ಆ.14 (DaijiworldNews/HR): ಆಗಸ್ಟ್ 14ನ್ನು ಇನ್ನು ಮುಂದೆ ದೇಶ ವಿಭಜನೆಯ ಕರಾಳ ನೆನಪಿನ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ವಿಭಜನೆಯ ನೋವನ್ನು ಎಂದಿಗೂ ಮರೆಯುವುದಕ್ಕೆ ಆಗುವುದಿಲ್ಲ. ದ್ವೇಷ ಮತ್ತು ಹಿಂಸಾಚಾರದಿಂದಾಗಿ ನಮ್ಮ ಲಕ್ಷಾಂತರ ಜನರು ಸ್ಥಳಾಂತರಗೊಂಡು ಅನೇಕರು ಪ್ರಾಣ ಕಳೆದುಕೊಂಡಿದ್ದು, ನಮ್ಮ ಜನರ ತ್ಯಾಗದ ನೆನಪಿಗಾಗಿ ಆಗಸ್ಟ್ 14 ಅನ್ನು ವಿಭಜನೆಯ ಕರಾಳ ನೆನಪಿನ ದಿನವನ್ನಾಗಿ ಪರಿಗಣಿಸಲಾಗುವುದು" ಎಂದಿದ್ದಾರೆ.
ಇನ್ನು ವಿಭಜನೆಯ ಕರಾಳ ನೆನಪಿನ ದಿನವು ಏಕತೆ, ಸಾಮಾಜಿಕ ಸಾಮರಸ್ಯ ಮತ್ತು ಮಾನವ ಸಬಲೀಕರಣದ ಮನೋಭಾವವನ್ನು ಇನ್ನಷ್ಟು ಬಲಪಡಿಸಲಿದೆ ಎಂದು ತಿಳಿಸಿದ್ದಾರೆ.