ಬೆಂಗಳೂರು, ಆ.14 (DaijiworldNews/HR): ಶಾಲೆಗಳಲ್ಲಿ ವಿದ್ಯಾರ್ಥಿಗಳು ಇಲ್ಲದಿದ್ದರೂ ಕೂಡ ಶಾಲೆಗಳ ಆವರಣದಲ್ಲಿ ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಈ ಕುರಿತು ಸುತ್ತೋಲೆ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ, "ಕೊರೊನಾ ನಿಯಮಾವಳಿಗಳನ್ನು ಅನುಸರಿಸುವುದರ ಜೊತೆಗೆ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡು ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ವಿಡಿಯೋವನ್ನು ಶಾಲೆಗಳು ಆನ್ ಲೈನ್ ನಲ್ಲಿ ಮಕ್ಕಳಿಗೆ ಶೇರ್ ಮಾಡಬೇಕು. ದೈಹಿಕ ತರಗತಿಗಳಿಗೆ ಹಾಜರಾಗಲು ಅನುಮತಿಸದ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಮ್ಮತಿಯಿಲ್ಲ" ಎಂದು ತಿಳಿಸಿದೆ.
"ಸ್ವಾತಂತ್ರ್ಯ ದಿನಾಚರಣೆ ಬಳಿಕ ವಿದ್ಯಾರ್ಥಿಗಳು ಸ್ವಾತಂತ್ರ್ಯ ದಿನದ ಮಹತ್ವ, ರಸಪ್ರಶ್ನೆ ಮತ್ತು ರಾಷ್ಟ್ರೀಯತೆಯ ಬಗ್ಗೆ ನಡೆಯುವ ವಿವಿಧ ಸ್ಪರ್ಧೆಗಳಲ್ಲಿ ಆನ್ ಲೈನ್ ಚರ್ಚೆಯಲ್ಲಿ ಭಾಗವಹಿಸಬೇಕು ಎಂದು ಸುತ್ತೋಲೆ ಹೊರಡಿಸಿದೆ.