ನವದೆಹಲಿ, ಆ.14 (DaijiworldNews/HR): ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಭಯೋತ್ಪಾದಕರು ಸ್ವಾತಂತ್ರ್ಯ ದಿನಾಚರಣೆಯಂದು ದಾಳಿ ನಡೆಸಲು ಸಂಚು ರೂಪಿಸಿದ್ದು, ಅವರಲ್ಲಿ ನಾಲ್ವರು ಉಗ್ರರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ.
ಸಾಂಧರ್ಭಿಕ ಚಿತ್ರ
ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕಾಶ್ಮೀರದಲ್ಲಿದ್ದ ಜೆಇಎಂ ಅಡಗುತಾಣಗಳ ಮೇಲೆ ಇಂದು ದಾಳಿ ನಡೆಸಿದ್ದು, ನಾಲ್ವರು ಉಗ್ರರನ್ನು ಬಂಧನಕ್ಕೊಳಪಡಿಸಿದ್ದಾರೆ.
ಬಂಧಿತ ಉಗ್ರರು ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಂದು ದಾಳಿ ನಡೆಸಲು ಸಂಚು ರೂಪಿಸಿದ್ದು, ಈ ಉಗ್ರರು ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆ.
ಇನ್ನು ಈ ಉಗ್ರರು ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿ ಡ್ರೋಣ್ ಮೂಲಕ ಕಾಶ್ಮೀರದಲ್ಲಿರುವ ಉಗ್ರರಿಗೆ ರವಾನಿಸುತ್ತಿದ್ದರು ಎನ್ನಲಾಗಿದೆ.