ಬಾಗಲಕೋಟೆ, ಆ 14 (DaijiworldNews/PY): "ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸಂಪುಟದಲ್ಲಿ ಸಚಿವ ಸ್ಥಾನ ನೀಡದೇ ಇರುವುದಕ್ಕೆ ನನಗೇನು ಬೇಸರ ಇಲ್ಲ. ಈ ಕಾರಣಕ್ಕೆ ನಾನು ರಾಜೀನಾಮೆ ಕೂಡಾ ನೀಡುವುದಿಲ್ಲ" ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ಧಾರೆ.
ನಗರದ ಪ್ರವಾಸಿಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಿಎಂ ಬೊಮ್ಮಾಯಿ ಅವರ ಸಂಪುಟದಲ್ಲಿ ಸಚಿವ ಸ್ಥಾನ ನೀಡದಕ್ಕೆ ನನಗೆ ಬೇಸರವಿಲ್ಲ. ನನ್ನ ಆಪ್ತರಿಗೂ ನೀಡದೇ ಇರುವುದಕ್ಕೂ ನನಗೆ ಬೇಸರವಿಲ್ಲ. ಈ ಕಾರಣಕ್ಕೆ ನಾನು ರಾಜೀನಾಮೆ ನೀಡುವುದಿಲ್ಲ" ಎಂದಿದ್ದಾರೆ.
"ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದು ನನಗೆ ಬಹಳ ಸಂತೋಷವಾಗಿದೆ. ನಮ್ಮ ಗುರಿ ಈಗ 2023ರಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ತರುವುದು. ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಆದ್ಯತೆ ನೀಡಿ ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ" ಎಂದು ತಿಳಿಸಿದ್ದಾರೆ.
"ಸಚಿವ ಸ್ಥಾನ ಯಾರಿಗೆ ನೀಡಬೇಕು, ಯಾರಿಗೆ ನೀಡಬಾರದು ಎನ್ನುವ ವಿಚಾರ ಬಿಜೆಪಿ ವರಿಷ್ಠರಿಗೆ ಬಿಟ್ಟಿದ್ದು. ಈಗಾಗಲೇ ಹಲವಾರು ಶಾಸಕರಿಗೆ ಸಚಿವ ಸ್ಥಾನ ನೀಡಿದ್ದಾರೆ. ನನಗೂ ಹಾಗೂ ನನ್ನ ಆಪ್ತರಿಗೆ ಸಚಿವ ಸ್ಥಾನ ನೀಡದ್ದಕ್ಕೆ ಬೇಸರ ಇಲ್ಲ. ಈ ಕಾರಣದಿಂದ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುವುದಿಲ್ಲ" ಎಂದಿದ್ದಾರೆ.