ಹರಿಯಾಣ, ಆ 14 (DaijiworldNews/PY): ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪೊಲೀಸರು ಸೇರಿದಂತೆ ನಾಲ್ವರು ಮೃತಪಟ್ಟ ಘಟನೆ ಹರಿಯಾಣದ ಅಂಬಾಲಾ-ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ನಡೆದಿದೆ.
ಸಾಂದರ್ಭಿಕ ಚಿತ್ರ
ಮೃತರನ್ನು ಕಾನ್ಸ್ಟೇಬಲ್ ಬಲ್ವಿಂದರ್ ಸಿಂಗ್ (28), ಸಹಾಯಕ ಸಬ್ ಇನ್ಸ್ಪೆಕ್ಟರ್ ನಸೀಬ್ ಸಿಂಗ್(52), ಪರ್ದೀಪ್ ಕುಮಾರ್ (32) ಹಾಗೂ ಮನೀಶ್ ಕುಮಾರ್ (30) ಎಂದು ಗುರುತಿಸಲಾಗಿದೆ.
"ಜಗ್ಗಿ ನಗರ ಕೇಂದ್ರದ ಬಳಿ ಈ ಅಪಘಾತ ಸಂಭವಿಸಿದ್ದು, ತಮ್ಮ ಪೊಲೀಸ್ ವ್ಯಾನ್ ಬಳಿ ನಿಂತು ಇಬ್ಬರು ಪೊಲೀಸ್ ಅಧಿಕಾರಿಗಳು ಇತರ ಇಬ್ಬರೊಂದಿಗೆ ಮಾತನಾಡುತ್ತಿದ್ದರು. ಈ ವೇಳೆ ಟ್ರಕ್ ಪೊಲೀಸ್ ವ್ಯಾನ್ಗೆ ಢಿಕ್ಕಿಯಾಗಿದೆ" ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
"ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ" ಎಂದು ಪೊಲೀಸರು ಹೇಳಿದ್ದಾರೆ.