ಬೆಂಗಳೂರು, ಆ.14 (DaijiworldNews/HR): ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಕಡಿಮೆ ಇದೆಯೋ, ಆ ಜಿಲ್ಲೆಗಳಲ್ಲಿ ಶಾಲೆಗಳನ್ನು ಆರಂಭಿಸಲಾಗುತ್ತದೆ. ಒಂದು ವೇಳೆ ಕೊರೊನಾ ಪ್ರಕರಣಗಳ ಸಂಖ್ಯೆ ವರದಿಯಾದಂತ ಶಾಲೆಗಳನ್ನು ಬಂದ್ ಮಾಡಿ, ಮುಂಜಾಗ್ರಾತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕೊರೊನಾ ನಿರ್ವಹಣಾ ಸಭೆಯ ಬಳಿಕ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, "ಕೊರೊನಾ ನಿರ್ವಣೆಯ ತಜ್ಞರ ಸಮಿತಿ, ಕೊರೊನಾ ಉಸ್ತುವಾರಿ ಸಚಿವರು ಮತ್ತು ಎಲ್ಲಾ ಅಧಿಕಾರಿಗಳ ಜೊತೆಗೆ ಸುಧೀರ್ಘವಾಗಿ ಚರ್ಚಿಸಿ, ತಜ್ಞರ ಸಮಿತಿಯು ಬಹಳ ವೈಜ್ಞಾನಿಕವಾದಂತ ಅಂಕಿ ಅಂಶಗಳ ಸಮೇತವಾಗಿ ಮತ್ತು ಅಂತರಾಷ್ಟ್ರೀಯ, ರಾಷ್ಟ್ರೀಯ ಟ್ರೆಂಡ್ ಬಗ್ಗೆ, ಅದಲ್ಲದೇ ನೆರೆಯ ಕೇರಳ, ಮಹಾರಾಷ್ಟ್ರದ ಕೊರೊನಾ ಸ್ಥಿತಿಗತಿಗಳ ಬಗ್ಗೆ ತಿಳಿಸಿದ್ದಾರೆ" ಎಂದರು.
ಕೊರೊನಾದ 2ನೇ ಅಲೆ ಪೂರ್ಣ ಪ್ರಮಾಣದಲ್ಲಿ ಕಡಿಮೆಯಾಗಿಲ್ಲ. ಈಗ ಅಲೆ ಕಡಿಮೆಯಾದ್ರೂ ಕೂಡ 1400, 1800ರವರೆಗೆ ಪ್ರಕರಣಗಳು ವರಿದಿಯಾಗುತ್ತಿವೆ. ಹೀಗಾಗಿ ಶಾಲೆಗಳ ಆರಂಭದ ಬಗ್ಗೆಯೂ ಚರ್ಚಿಸಲಾಗಿದೆ. ಯಾವ ಜಿಲ್ಲೆಯಲ್ಲಿ ಶಾಲೆ ಆರಂಭ ಕುರಿತಂತೆಯೂ ಚರ್ಚೆ ನಡೆಸಲಾಗಿದೆ. ಯಾವ ಜಿಲ್ಲೆಯಲ್ಲಿ ಕೋವಿಡ್ ಹೆಚ್ಚಿದೆ ಅಲ್ಲಿ ಶಾಲೆ ಆರಂಭಿಸೋದು ಬೇಡ. ಕೋವಿಡ್ ಪಾಸಿಟಿವಿಟಿ ದರ ಕಡಿಮೆ ಇದೆ ಅಲ್ಲಿ ಶಾಲೆಗಳನ್ನು ಆರಂಭಿಸೋ ಬಗ್ಗೆಯೂ ಚರ್ಚಿಸಲಾಗಿದೆ ಎಂದಿದ್ದಾರೆ.
ಇನ್ನು ಶಾಲೆಗಳ ಆರಂಭಕ್ಕೂ ಮುನ್ನಾ ಪೋಷಕರು, ಶಿಕ್ಷಕರಿಗೆ ಕೊರೊನಾ ಲಸಿಕೆ ನೀಡಬೇಕು. ಶಾಲೆ ಆರಂಭವಾದ ಬಳಿಕ ಕೊರೊನಾ ಪ್ರಕರಣ ಹೆಚ್ಚಾದರೆ ಆ ಶಾಲೆಗಳನ್ನು ಕ್ಲೋಸ್ ಮಾಡಿ ಆನಂತ್ರ ಆರಂಭಿಸೋ ಬಗ್ಗೆಯೂ ಚರ್ಚಿಸಲಾಯಿತು. ಇದಲ್ಲದೇ ಜಿಲ್ಲಾವಾರು ಕೋವಿಡ್ ನಿರ್ವಹಣೆ ಕುರಿತಂತೆಯೂ ಚರ್ಚಿಸಲಾಗಿದೆ. ಜಿಲ್ಲಾವರು ಕೋವಿಡ್ ನಿಯಂತ್ರಣದ ಬಗ್ಗೆ ಆ ಜಿಲ್ಲೆಯಲ್ಲೇ ನಿರ್ವಹಣಾ ತಜ್ಞರ ಸಮಿತಿಯನ್ನು ರಚಿಸುವಂತ ಚಿಂತನೆ ನಡೆಸಲಾಗಿದೆ ಎಂದರು.
ಈ ಪ್ರಕಾರವಾಗಿ ದಕ್ಷಿಣ ಕನ್ನಡ, ಮೈಸೂರು, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಚಾಮರಾಜನಗರ ಈ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಹೆಚ್ಚಾಗಿದ್ದು, ಈ ಜಿಲ್ಲೆಗಳಲ್ಲಿ ಟೆಸ್ಟಿಂಗ್, ವ್ಯಾಕ್ಸಿನ್ ಹೆಚ್ಚಿಸಲಾಗುತ್ತದೆ. ಗಡಿ ಜಿಲ್ಲೆಗಳಲ್ಲಿನ ಹಳ್ಳಿಗಳಲ್ಲಿನ 10 ಕಿಲೋಮೀಟರ್ ವ್ಯಾಪ್ತಿಯಲ್ಲಿನ ಎಲ್ಲಾ ಗ್ರಾಮಗಳಲ್ಲಿಯೂ ಸಂಪೂರ್ಣ ಕೊರೊನಾ ಪರೀಕ್ಷೆ ಮಾಡುವಂತ ಕ್ರಮದ ಸೂಚನೆ ನೀಡಿದ್ದಾರೆ ಎಂದು ಹೇಳಿದ್ದಾರೆ.
ಇನ್ನು "ಸದ್ಯಕ್ಕೆ ಲಾಕ್ ಡೌನ್ ಅಥವಾ ಯಾವುದೇ ಹೊಸ ನಿಯಮಗಳ ಜಾರಿ ಬೇಡ, ಅಗತ್ಯ ಬಿದ್ದರೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗುವುದು. ದಕ್ಷಿಣ ಕನ್ನಡ, ಕಲಬುರ್ಗಿ, ಮೈಸೂರು, ಚಾಮರಾಜನಗರ, ಕೊಡಗು, ಬೆಳಗಾವಿ, ವಿಜಯಪುರ, ಬೀದರ್ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರೆಯಲಿದೆ" ಎಂದು ತಿಳಿಸಿದ್ದಾರೆ.