ನವದೆಹಲಿ, ಆ 15 (DaijiworldNews/PY): ದೇಶದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರು 75 ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ನಿಮ್ಮೆಲ್ಲರಿಗೂ 75 ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಈ ವರ್ಷ ದೇಶದ ಜನರಿಗೆ ಹೊಸ ಶಕ್ತಿ, ಹೊಸ ಚೈತನ್ಯ, ಭರವಸೆ ತುಂಬಲಿ" ಎಂದು ಶುಭಹಾರೈಸಿದ್ದಾರೆ.
75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಇಂದು ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿಯವರು ಧ್ವಜಾರೋಹಣ ಮಾಡಿದ್ದಾರೆ. ಮೋದಿಯವರು ದೇಶದ ಪ್ರಧಾನಿಯಾಗಿ ಕೆಂಪು ಕೋಟೆ ಮೇಲೆ ಸತತ 8ನೇ ಬಾರಿಗೆ ಧ್ವಜಾರೋಹಣ ಮಾಡಿದ್ದು, ದೇಶವನ್ನುದ್ದೇಶಿಸಿ ಮಾತನಾಡುತ್ತಿದ್ದಾರೆ.