ತುಮಕೂರು, ಆ 15 (DaijiworldNews/HR): ಧ್ವಜಸ್ತಂಭ ನಿಲ್ಲಿಸುವ ವೇಳೆ ಮೂವರು ಬಾಲಕರಿಗೆ ವಿದ್ಯುತ್ ಪ್ರವಹಿಸಿ, ಓರ್ವ ಮೃತಪಟ್ಟ ಘಟನೆ ತುಮಕೂರುರಿನ ಕೋರಾ ಹೋಬಳಿಯ ಕರೀಕೆರೆ ಗ್ರಾಮದಲ್ಲಿ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದಂದೇ ನಡೆದಿದೆ.
ಮೃತಪಟ್ಟವನನ್ನು ಚಂದನ್ (16) ಎಂದು ಗುರುತಿಸಲಾಗಿದ್ದು, ಶಶಂಕ್ ( 16), ಪವನ್ ( 22), ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಗಾಯಗೊಂಡಿದ್ದು, ಅವರನ್ನು ತುಮಕೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಸರ್ಕಾರಿ ಶಾಲೆಯಲ್ಲಿ ಧ್ವಜಸ್ತಂಭ ನಿಲ್ಲಿಸುತ್ತಿದ್ದ ವೇಳೆ ವಿದ್ಯುತ್ ತಂತಿಗೆ ತಗುಲಿ ಮೂವರಿಗೆ ಶಾರ್ಟ್ ಸರ್ಕ್ಯೂಟ್ ಆಗಿದೆ.
ಇನ್ನು ಈ ಘಟನೆ ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬಾಲಕರು ಆ ಶಾಲೆಯ ವಿದ್ಯಾರ್ಥಿಗಳಲ್ಲ ಎಂದು ತಿಳಿದುಬಂದಿದೆ.