ವಿಜಯನಗರ, ಆ 15 (DaijiworldNews/PY): "ನನ್ನ ನಕ್ಷತ್ರ ಹಾಗೂ ದೇವರ ಮುಹೂರ್ತ ನೋಡಿ ಖಾತೆ ಸ್ವೀಕರಿಸುತ್ತೇನೆ" ಎಂದು ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.
ಭಾನುವಾರ ನಗರದ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾಜ್ಯದಲ್ಲಿ ದಿಟ್ಟ ಹಾಗೂ ಸಮರ್ಥವಾದ ಅಧಿಕಾರಿಗಳಿದ್ದಾರೆ. ಅಲ್ಲಿಯವರೆಗೆ ಅವರು ಖಾತೆಯನ್ನು ನೋಡಿಕೊಳ್ಳಲಿದ್ದಾರೆ. ನಾನು ಅಧಿಕಾರ ವಹಿಸಿಕೊಳ್ಳದೇ ಇದ್ದಲ್ಲಿ ಅಭಿವೃದ್ದಿ ಕುಂಠಿತವಾಗುವುದಿಲ್ಲ. ಜನಪ್ರತಿನಿಧಿಗಳ ಮೇಲೆ ವ್ಯವಸ್ಥೆ ನಡಿಯುತ್ತಿಲ್ಲ. ಶಾಸಕಾಂಗ ಹಾಗೂ ಕಾರ್ಯಾಂಗ ಬಂಡಿ ಇದ್ದಂತೆ" ಎಂದಿದ್ದಾರೆ.
"ವಿಜಯನಗರ ಜಿಲ್ಲೆಯಲ್ಲಿ ಕಚೇರಿಗಳ ನಿರ್ಮಾಣ ಹಾಗೂ ಅಧಿಕಾರಿಗಳ ನೇಮಕ ಪ್ರಕ್ರಿಯೆ ನಡೆದಿದೆ. ಈಗಾಗಲೇ ಆರ್ಥಿಕ ಇಲಾಖೆಯಿಂದ ಜಿಲ್ಲೆಗೆ 50 ಕೋಟಿ ರೂ. ಬಿಡುಗಡೆಯಾಗಿದೆ. ನಾನು ಖಾತೆ ಗೊಂದಲದ ವಿಚಾರದ ಬಗ್ಗೆ ಏನೂ ಹೇಳುವುದಿಲ್ಲ" ಎಂದು ತಿಳಿಸಿದ್ದಾರೆ.