ಬಾಗಲಕೋಟೆ, ಆ 15 (DaijiworldNews/HR): ಸಚಿವ ಉಮೇಶ್ ಕತ್ತಿ ಅವರು ಸ್ವಾತಂತ್ರ್ಯ ದಿನಾಚರಣೆ ದಿನವೇ ಹೊಸ ಬಾಂಬ್ ಸಿಡಿಸಿದ್ದು, ನಾನೂ ಕೂಡ ಇದೇ ಅವಧಿಯಲ್ಲಿ ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮುಂಬರುವ ದಿನಗಳಲ್ಲಿ ನಾನೂ ಮುಖ್ಯಮಂತ್ರಿ ಆಗಬಹುದು. ಅಥವಾ ಇದೇ ಅವಧಿಯಲ್ಲಿ ನಾನು ಸಿಎಂ ಆಗಬಹುದು" ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ಇನ್ನು ಜೀವಂತವಾಗಿದ್ದರೆ ಇದೇ ಅವಧಿಯಲ್ಲಿ ನಾನು ಮುಖ್ಯಮಂತ್ರಿ ಆಗ್ತೀನಿ. ಸತ್ತರೆ ನನ್ನ ಕಡೆಯಿಂದ ಏನೂ ಮಾಡಲು ಆಗಲ್ಲ ಎಂದು ಹೇಳಿರುವ ಅವರು ರಾಜ್ಯ ರಾಜಕೀಯದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.