ನವದೆಹಲಿ, ಆ 15 (DaijiworldNews/HR): ಮೊದಲು ನಿಮ್ಮ ಮೇಲೆ ನಿಮಗೆ ನಂಬಿಕೆ ಇರಲಿ. ಬಳಿಕ ನಿಮ್ಮ ತರಬೇತಿದಾರರ ಮೇಲೆ ನಂಬಿಕೆ ಇರಲಿ. ಯಾವುದೇ ಒಳಮಾರ್ಗಗಳನ್ನು ಕಂಡುಕೊಳ್ಳಲು ಪ್ರಯತ್ನಿಸಬೇಡಿ" ಎಂದು ಯುವಕರಿಗೆ ನೀರಜ್ ಚೋಪ್ರಾ ಸಂದೇಶ ನೀಡಿದ್ದಾರೆ.
ಟೋಕಿಯೊ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಸೇರಿದಂತೆ ಕೀಡಾಪಟುಗಳು ಇಂದು ಕೆಂಪು ಕೋಟೆಯಲ್ಲಿ ನಡೆದ 75 ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಿದ್ದು, ಇದೇ ವೇಳೆ ಮಾತನಾಡಿರುವ ನೀರಜ್ ಚೋಪ್ರಾ, "ಮೊದಲು ನಿಮ್ಮ ಮೇಲೆ ನಿಮಗೆ ನಂಬಿಕೆ ಇರಬೇಕು, ಬಳಿಕ ನಿಮ್ಮ ತರಬೇತಿದಾರರ ಮೇಲೆ ನಂಬಿಕೆ ಇರಲಿ. ಯಾವುದೇ ಒಳಮಾರ್ಗಗಳನ್ನು ಕಂಡುಕೊಳ್ಳಲು ಪ್ರಯತ್ನಿಸಬೇಡಿ ಎಂದು ಯುವಕರಿಗೆ ಸಂದೇಶ ನೀಡಿದ ಅವರು ಕೆಂಪುಕೋಟೆಯಲ್ಲಿ ನಡೆದ ರಾಷ್ಟ್ರಧ್ವಜಾರೋಹಣ ಸಮಾರಂಭದಲ್ಲಿ ಭಾಗವಹಿಸಲು ತಮಗೆ ಅವಕಾಶ ನೀಡಿದ್ದಕ್ಕಾಗಿ ಪ್ರಧಾನಿ ಮೋದಿಯವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ಇನ್ನು ಒಲಿಂಪಿಕ್ಸ್ನ ಅಥ್ಲೆಟಿಕ್ಸ್ನಲ್ಲಿ ಭಾರತಕ್ಕೆ ಮೊತ್ತಮೊದಲ ಚಿನ್ನ ಗೆದ್ದುಕೊಟ್ಟ ನೀರಜ್ ಚೋಪ್ರಾ, ಪುರುಷರ ಜಾವೆಲಿನ್ ಥ್ರೋ ವಿಶ್ವ ರ್ಯಾಂಕಿಂಗ್ನಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ.
ಟೋಕಿಯೊ ಒಲಿಂಪಿಕ್ಸ್ನಲ್ಲಿ ಗರಿಷ್ಠ 87.58 ಮೀಟರ್ ದೂರ ಜಾವೆಲಿನ್ ಎಸೆದಿರುವ ನೀರಜ್ ಚೋಪ್ರಾ, ಚಿನ್ನ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.