ಬೆಂಗಳೂರು, ಆ 15 (DaijiworldNews/PY): ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪೊಲೀಸರು ನಿನ್ನೆ ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ನಂತರ ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿ ಆರೋಪಿಗಳಾದ ಸಾಗರ್ ತಾಪ, ನವೀನ್ ಹಾಗೂ ಶ್ರೀಧರ್ಗೆ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದೆ.
ಮೂವರು ಆರೋಪಿಗಳನ್ನು ಪೊಲೀಸರು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದಿದ್ಧಾರೆ. ನಾಳೆ ಮತ್ತೆ ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲು ಪೊಲೀಸರು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.