ಚಿಕ್ಕಮಗಳೂರು, ಆ 15 (DaijiworldNews/PY): "ಸಿದ್ದರಾಮಯ್ಯ ಅವರು ಹೇಳಿದ್ದು ಉಲ್ಟಾ ಆಗುತ್ತದೆ. ಅವರ ಬಾಯಲ್ಲಿ ಉಲ್ಟಾ ಮಚ್ಚೆ ಇದೆ" ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ. ಟಿ ರವಿ ಲೇವಡಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಿದ್ದರಾಮಯ್ಯ ಅವರು ಕಾಲಜ್ಞಾನಿನಾ?. ಅವರು ಹೇಳಿದ್ದೆಲ್ಲಾ ಉಲ್ಟಾ ಆಗುತ್ತದೆ. ಏಕೆಂದರೆ ಅವರ ಬಾಯಲ್ಲಿ ಉಲ್ಟಾ ಮಚ್ಚೆ ಇದೆ" ಎಂದು ವ್ಯಂಗ್ಯವಾಡಿದ್ದಾರೆ.
"ಅಪ್ಪನಾಣೆ ನರೇಂದ್ರ ಮೋದಿ ಅವರು ಪ್ರಧಾನಿ ಆಗುವುದಿಲ್ಲ ಎಂದು ಹೇಳಿದ್ದರು. ಆದರೆ, ಅವರು ಹೇಳಿದ್ದು ಉಲ್ಟಾ ಆಗಿದೆ. ನರೇಂದ್ರ ಮೋದಿ ಅವರು ಎರಡು ಸಲ ಪ್ರಧಾನಿಯಾದರು. ನಾನು 2018ರಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೇನೆ ಎಂದು ಹೇಳಿದ್ದರು. ಆದರೆ, ಎಲ್ಲಿ ಅಧಿಕಾರಕ್ಕೆ ಬಂದಿದ್ದಾರೆ. ಅವರು ಹೇಳಿದ್ದೆಲ್ಲಾ ಉಲ್ಟಾ ಆಗುತ್ತಿದೆ" ಎಂದಿದ್ದಾರೆ.
"ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದರೆ ನೂರಕ್ಕೆ ನೂರು ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಬಿಜೆಪಿ ಉಳಿಯಲ್ಲ ಎಂದರೆ, ಈ ಅವಧಿ ಪೂರ್ಣಗೊಳಿಸಿ ಮತ್ತೆ ಮುಂದಿನ ಐದು ವರ್ಷಕ್ಕೂ ಬರುತ್ತದೆ. ಅವರು ಹೇಳಿದಂತೆ ನಡೆಯುತ್ತದೆ ಎಂದು ಕೆಲವರ ಬಾಯಲ್ಲಿ ಮಚ್ಚೆ ಇರುತ್ತದೆ ಎಂದು ಹೇಳುತ್ತಾರೆ. ಆದರೆ, ಸಿದ್ದರಾಮಯ್ಯ ಅವರು ಹೇಳಿದ್ದೆಲ್ಲಾ ಉಲ್ಟಾ ಆಗುತ್ತದೆ. ಅವರ ಬಾಯಲ್ಲಿ ಉಲ್ಟಾ ಮಚ್ಚೆ ಇದೆ" ಎಂದು ತಿಳಿಸಿದ್ದಾರೆ.