ಬೆಂಗಳೂರು, ಆ 15 (DaijiworldNews/HR): ಇಡಿ ಅಧಿಕಾರಿಗಳು ಶಾಸಕ ಜಮೀರ್ ಅಹ್ಮದ್ ಖಾನ್ ಅವರ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿದ ಬಳಿಕ ಇದೇ ಮೊದಲ ಬಾರಿಗೆ ಜಮೀರ್ರನ್ನು ಸಿದ್ಧರಾಮಯ್ಯ ಅವರು ಭೇಟಿ ಮಾಡಿದ್ದಾರೆ.
ಶನಿವಾರ ಸಂಜೆ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ ಶಾಸಕ ಜಮೀರ್ ಅಹ್ಮದ್ ಖಾನ್ ಅವರು ತಮ್ಮ ಮನೆಗೆ ಭೇಟಿ ನೀಡುವಂತೆ ಆಹ್ವಾನಿಸಿದ್ದರು. ಹೀಗಾಗಿ ಇಂದು ಜಮೀರ್ ಅಹ್ಮದ್ ಮನೆಗೆ ಸಿದ್ಧರಾಮಯ್ಯ ಭೇಟಿ ನೀಡಿದ್ದಾರೆ.
ಇನ್ನು ಈ ಕುರಿತು ಟ್ವೀಟ್ ಮಾಡಿರುವ ಜಮೀರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನನ್ನ ನಿವಾಸಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರ ಜನ್ಮದಿನಕ್ಕೆ ಶುಭ ಹಾರೈಸಿ, ಹೂಗುಚ್ಛ ನೀಡಿದೆ" ಎಂದು ಹೇಳಿದ್ದಾರೆ.