ಬೆಂಗಳೂರು, ಆ.16 (DaijiworldNews/HR): ಕರ್ನಾಟಕದ ನೆಲ, ಜಲ ಮತ್ತು ಭಾಷೆಯ ವಿಚಾರದಲ್ಲಿ ನಾನು ಯಾರೊಂದಿಗೂ ರಾಜಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರದಿಂದ ಶೀಘ್ರ ಅನುಮೋದನೆ ದೊರೆಯುವ ನಿರೀಕ್ಷೆ ಇದ್ದು, ಕಾವೇರಿ ಜಲವಿವಾದ ನ್ಯಾಯಾಧೀಕರಣ, ಸುಪ್ರೀಂಕೋರ್ಟ್ ಆದೇಶಗಳನ್ವಯ ರಾಜ್ಯಕ್ಕೆ ಹಂಚಿಕೆಯಾಗಿರುವ ಹೆಚ್ಚುವರಿ ನೀರಿನ ಸದ್ಭಳಕ್ಗೆ ಈ ಯೋಜನೆ ಸಹಕಾರಿಯಾಗಲಿದೆ" ಎಂದರು.
ಇನ್ನು ತಮಿಳುನಾಡು ರಾಜ್ಯ ಎಷ್ಟೇ ಅಡ್ಡಿಪಡಿಸಿದರೂ ಮೇಕೆದಾಟು ಯೋಜನೆಯನ್ನು ಕೈಬಿಡುವ ಪ್ರಶ್ನೆಯೇ ಇಲ್ಲ. ಕುಡಿಯುವ ನೀರು ಮತ್ತು ವಿದ್ಯುತ್ ಉತ್ಪಾದನೆಗೆ ಅಗತ್ಯವಾದ ಈ ಯೋಜನೆಯ ಅನುಷ್ಠಾನದಿಂದ ರಾಜ್ಯ ಹಿಂದೆ ಸರಿಯುವುದಿಲ್ಲ" ಎಂದಿದ್ದಾರೆ.