ನವದೆಹಲಿ, ಆ.16 (DaijiworldNews/HR): ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ 56.81 ಕೋಟಿ ಡೋಸ್ ಕೊರೊನಾ ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ.
ಸಾಂಧರ್ಭಿಕ ಚಿತ್ರ
ಈ ಕುರಿತು ಮಾಹಿತಿ ನೀಡಿರುವ ಸಚಿವಾಲಯ, "ರಾಜ್ಯಗಳಿಗೆ ಈವರೆಗೆ ಕೇಂದ್ರವು 56.81 ಕೋಟಿ ಪ್ರಮಾಣದಷ್ಟು ಕೊರೊನಾ ಲಸಿಕೆ ಪೂರೈಸಿದ್ದು, ಸದ್ಯಕ್ಕೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಳಕೆಯಾಗದ ಒಟ್ಟು 2.89 ಕೋಟಿ ಡೋಸ್ ಕೊರೊನಾ ಲಸಿಕೆಗಳಿವೆ" ಎಂದಿದೆ.
ಇನ್ನುಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಲಸಿಕೆಗೆ ಪ್ರಧಾನಿ ಚಾಲನೆ ನೀಡಿದ್ದು, ಇಲ್ಲಿಯವರೆಗೂ ಒಟ್ಟಾರೆ 54,58,57,108 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.