ನವದೆಹಲಿ, ಆ 16 (DaijiworldNews/PY): ಟೋಕಿಯೊ ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ಗೆದ್ದು ತಂದಿರುವ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಅವರೊಂದಿಗೆ ಪ್ರಧಾನಿ ಮೋದಿ ಅವರು ಐಸ್ ಕ್ರೀಂ ಸವಿದಿದ್ದು, ಈ ಮೂಲಕ ಪ್ರಧಾನಿ ಮೋದಿ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ.
ಟೋಕಿಯೊ ಒಲಿಂಪಿಕ್ಸ್ನಿಂದ ವಾಪಾಸ್ಸಾದ ಬಳಿಕ ಜೊತೆಯಾಗಿ ಐಸ್ ಕ್ರೀಂ ಸವಿಯುವುದಾಗಿ ಪ್ರಧಾನಿ ಮೋದಿ ಅವರು ಮಾತು ನೀಡಿದ್ದರು. ಅದರಂತೆ ಇಂದು ತಮ್ಮ ನಿವಾಸದಲ್ಲಿ ಭಾರತೀಯ ಕ್ರೀಡಾಪಟುಗಳಿಗೆ ಆತಿಥ್ಯ ನೀಡಿದ್ದು, ಈ ವೇಳೆ ಸಿಂಧು ಅವರೊಂದಿಗೆ ಪ್ರಧಾನಿ ಮೋದಿ ಅವರು ಐಸ್ ಕ್ರೀಂ ಸವಿದಿದ್ದಾರೆ.
ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಅತ್ಯುತ್ತಮವಾಗಿ ಪ್ರದರ್ಶನ ನೀಡಿದ್ದ ಕ್ರೀಡಾಪಟುಗಳನ್ನು ವೈಯುಕ್ತಿಕವಾಗಿ ಭೇಟಿ ಮಾಡಿದ್ದ ಪ್ರಧಾನಿ ಮೋದಿ ಅವರು, ಅವರ ಸಾಧನೆಯನ್ನು ಕೊಂಡಾಡಿದ್ದಾರೆ.