ಬೆಂಗಳೂರು, ಆ.17 (DaijiworldNews/HR): ಕರ್ನಾಟಕದಲ್ಲಿ ಪೆಟ್ರೋಲ್ ಮೇಲಿನ ತೆರಿಗೆ ಕಡಿತ ಪ್ರಸ್ತಾಪ ಇಲ್ಲ ಎಂದು ತಮಿಳುನಾಡಿನಲ್ಲಿ ಅಲ್ಲಿನ ಸರ್ಕಾರ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 3 ತೆರಿಗೆ ಕಡಿತ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ತಪಾಸಣೆಯ ನೆಗೆಟಿವ್ ವರದಿ ಕೊಡುತ್ತಿರುವುದು ನಮ್ಮ ಗಮನಕ್ಕೂ ಬಂದಿದ್ದು, ಬಸ್ ನಿಲ್ದಾಣ, ರೈಲು ನಿಲ್ದಾಣ ಮುಂತಾದ ಕಡೆ ಕೋವಿಡ್ ಪರೀಕ್ಷೆಯಲ್ಲಿ ದಂಧೆ ನಡೆಯುತ್ತಿದೆ. ಈ ಸಂಬಂಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ" ಎಂದರು.
ಇನ್ನು ಬೆಂಗಳೂರು ನಗರ ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಹೊಂದಿದ್ದು, ಇತ್ತೀಚೆಗೆ ಪ್ರಧಾನಿ ಅವರನ್ನು ಭೇಟಿ ಮಾಡಿದಾಗ ಬೆಂಗಳೂರು ನಗರದ ಬಗ್ಗೆ ಚರ್ಚೆ ಆಗಿದೆ. ಪ್ರಧಾನಿ ಕೂಡ ಬೆಂಗಳೂರು ನಗರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ" ಎಂದು ಹೇಳಿದ್ದಾರೆ.