ನವದೆಹಲಿ, ಆ.17 (DaijiworldNews/HR): ದೇಶದಲ್ಲಿ ಕೊರೊನಾ ಪ್ರಕರಣ ಇಳಿಮುಖವಾಗುತ್ತಿದ್ದು, ಕಳೆದ 24ಗಂಟೆಗಳಲ್ಲಿ 25,166 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಚೇತರಿಕೆ ಪ್ರಮಾಣ ಕೂಡ ಏರಿಕೆಯಾಗಿದೆ.
ಸಾಂಧರ್ಭಿಕ ಚಿತ್ರ
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, "ಕಳೆದ 154 ದಿನಗಳ ಬಳಿಕ ಇದೇ ಮೊದಲ ಬಾರಿಗೆ ಭಾರತದಲ್ಲಿ 25,166 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆ 3,69,846ಕ್ಕೆ ಇಳಿಕೆಯಾಗಿದೆ.
ಇನ್ನು ದೇಶದಲ್ಲಿ ಕೊರೊನಾ ಚೇತರಿಕೆ ಪ್ರಮಾಣ ಶೇ.97.51ಕ್ಕೆ ಏರಿಕೆಯಾಗಿದ್ದು, ಕಳೆದ 24ಗಂಟೆಗಳಲ್ಲಿ 437 ಮಂದಿ ಸೋಂಕಿಗೆ ಬಲಿಯಾಗಿದ್ದು, ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಒಟ್ಟು 4,32,079 ಮಂದಿ ಸಾವನ್ನಪ್ಪಿದ್ದಾರೆ.
ಸೋಮವಾರ 15,63,985 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ. ದಿನದ ಪಾಸಿಟಿವಿಟಿ ದರ ಶೇ.1.61ಕ್ಕೆ ಇಳಿಕೆಯಾಗಿದೆ ಎಂದು ಸಚಿವಾಲಯದ ವರದಿ ತಿಳಿಸಿದೆ.