ಮುಂಬೈ, ಆ.17 (DaijiworldNews/HR): ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ಅವರು ಬುಧವಾರ ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ, ಎನ್ಸಿಪಿ ನಾಯಕ ಅನಿಲ್ ದೇಶ್ಮುಖ್ ಅವರನ್ನು ತನಿಖಾ ಸಂಸ್ಥೆ ಬಂಧಿಸದಂತೆ ಮಧ್ಯಂತರ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ ಎನ್ನಲಾಗಿದೆ.
ದೇಶ್ಮುಖ್ ಅವರು ಆಗಸ್ಟ್ 18 ರಂದು ದಕ್ಷಿಣ ಮುಂಬೈನಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಯಲ್ಲಿ ಪ್ರಕರಣದ ತನಿಖಾಧಿಕಾರಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದ್ದು, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೇಶ್ಮುಖ್ ಅವರಿಗೆ ನೀಡುತ್ತಿರುವ ಐದನೇ ಸಮನ್ಸ್ ಇದಾಗಿದೆ.