ನವದೆಹಲಿ, ಆ 18 (DaijiworldNews/PY): ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ವಿಶೇಷ ನ್ಯಾಯಾಲಯ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರನ್ನು ಆರೋಪಮುಕ್ತಗೊಳಿಸಿ ಆದೇಶ ಹೊರಡಿಸಿದೆ.
ಶಶಿ ಕುಮಾರ್ ಅವರ ಪತ್ನಿ ಸುನಂದಾ ಪುಷ್ಕರ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ವಿಶೇಷ ನ್ಯಾಯಾಲಯವು ಬುಧವಾರ ತೀರ್ಪು ಪ್ರಕಟಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿ ತರೂರ್ ಅವರನ್ನು ಆರೋಪಮುಕ್ತಗೊಳಿಸಿದೆ.
ಪತ್ನಿ ಸುನಂದಾ ಪುಷ್ಕರ್ ಸಾವಿ ನ ಪ್ರಕರಣದಲ್ಲಿ ತನಿಖೆ ನಡೆಸಿದ ವಿವಿಧ ತಜ್ಞರು ಸುನಂದಾ ಸಾವಿಗೆ ಕಾರಣ ಏನು ಎಂದು ಖಚಿತ ಅಭಿಪ್ರಾಯ ನೀಡಿಲ್ಲ. ಹಾಗಾಗಿ ತಮ್ಮ ವಿರುದ್ಧದ ಆರೋಪ ಕೈಬಿಡುವಂತೆ ಶಶಿ ತರೂರ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ನಲ್ಲಿ ಇಂದು ವಿಚಾರಣೆ ನಡೆಸಲಾಯಿತು.
ದೆಹಲಿ ಹೈಕೋರ್ಟ್, ಈ ಪ್ರಕರಣದ ವಿಚಾರಣೆ ನಡೆಸಿದ್ದು, ಶಶಿ ತರೂರ್ ಮನವಿಯನ್ನು ಪುರಸ್ಕರಿಸಿ, ಅವರ ವಿರುದ್ದದ ಆರೋಪಗಳನ್ನು ಕೈಬಿಡುವಂತೆ ಸೂಚನೆ ನೀಡಿದೆ.
ನವದೆಹಲಿಯ ಪಂಚತಾರಾ ಹೋಟೆಲ್ನ ಕೋಣೆಯೊಂದರಲ್ಲಿ 2014ರಲ್ಲಿ ಸುನಂದಾ ಪುಷ್ಕರ್ ಅವರು ಶವವಾಗಿ ಪತ್ತೆಯಾಗಿದ್ದರು. ಇದನ್ನು ಆಧರಿಸಿ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದು, ಈ ಹಿನ್ನೆಲೆ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತ್ತು.
ಸುನಂದಾ ಪುಷ್ಕರ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸದಂತೆ ಶಶಿ ತರೂರ್ ಅವರಿಗೆ 2018ರ ಜುಲೈ 5ರಂದು ಜಾಮೀನು ಮಂಜೂರಾಗಿದೆ. ಶಶಿ ತರೂರ್ ಅವರು, ತಮ್ಮ ವಿರುದ್ದದ ಆರೋಪವನ್ನು ಕೈಬಿಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.