ಮುಂಬೈ, ಆ18 (DaijiworldNews/MS): ಅಶ್ಲೀಲ ಚಿತ್ರಗಳ ನಿರ್ಮಾಣ ಹಾಗೂ ಮೊಬೈಲ್ ಅಪ್ಲಿಕೇಷನ್ಗಳಲ್ಲಿ ಪಾರ್ನ್ ವಿಡಿಯೋಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಬಂಧಿತರಾಗಿದ್ದ ಶಿಲ್ಪಾ ಶೆಟ್ಟಿ ಅವರ ಪತಿ ಹಾಗೂ ಉದ್ಯಮಿಯಾಗಿರುವ ರಾಜ್ ಕುಂದ್ರಾ ಅಶ್ಲೀಲ ವಿಡಿಯೊ ದಂಧೆ ಪ್ರಕರಣದಲ್ಲಿ ಮುಂಬೈ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಆಗಸ್ಟ್ 25ಕ್ಕೆ ಮುಂದೂಡಿದೆ. ವಯಸ್ಕರ ಅಶ್ಲೀಲ ವಿಡಿಯೊಗಳನ್ನು ತಯಾರಿಸಿ ಅದರ ಆ್ಯಪ್ ನ್ನು ವಿದೇಶಗಳಲ್ಲಿ ಬಿಡುಗಡೆ ಮಾಡುತ್ತಿದ್ದ ಆರೋಪದ ಮೇಲೆ ರಾಜ್ ಕುಂದ್ರಾ ಅವರನ್ನು ಜುಲೈ 19ರಂದು ಮುಂಬೈ ಪೊಲೀಸರು ಬಂಧಿಸಿದ್ದರು.
ಇದರಿಂದಾಗಿ ಪ್ರಕರಣದಲ್ಲಿ ರಾಜ್ ಕುಂದ್ರಾ ಬಂಧನದಿಂದ ಪಾರಾಗಿದ್ದಾರೆ.