ಬೆಂಗಳೂರು, ಆ 19 (DaijiworldNews/MS): 2020-21ನೇ ಸಾಲಿನ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯೂ ಮುಂದಿನ ತಿಂಗಳು ಅಂದರೆ ಸೆಪ್ಟೆಂಬರ್ 27 ಹಾಗೂ 29 ರಂದು ಎರಡು ದಿನ ನಡೆಯಲಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ.
ಕಳೆದ ತಿಂಗಳು ನಡೆದ ಮುಖ್ಯ ಪರೀಕ್ಷೆಯಂತೆಯ ಮಾದರಿಯಲ್ಲೇ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ನಡೆಯಲಿದ್ದು, ಒಂದು ದಿನ ಮುಖ್ಯ ವಿಷಯಗಳು ಹಾಗೂ ಮತ್ತೊಂದು ದಿನ ಭಾಷಾ ವಿಷಯ ಪರೀಕ್ಷೆ ನಡೆಯಲಿದೆ. 2020-21ನೇ ಸಾಲಿನಲ್ಲಿ ಮುಖ್ಯ ಪರೀಕ್ಷೆಗೆ ನೋಂದಣಿ ಮಾಡಿಕೊಂಡ ಹಾಗೂ ಕೊವಿಡ್ ಕಾರಣಕ್ಕೆ ಗೈರಾದ ವಿದ್ಯಾರ್ಥಿಗಳಿಗೆ ನಡೆಯುವ ಪೂರಕ ಪರೀಕ್ಷೆ ಇದಾಗಿದೆ.
ಪೂರಕ ಪರೀಕ್ಷೆ ಪ್ರಶ್ನೆ ಪತ್ರಿಕೆ ಬಹು ಆಯ್ಕೆ ಮಾದರಿಯಲ್ಲಿ ಇರಲಿದ್ದು, ಪ್ರತಿ ವಿಷಯಕ್ಕೆ 40 ಅಂಕಗಳು ಇರುತ್ತವೆ. ಸಪ್ಟೆಂಬರ್ 27 ರಂದು ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪರೀಕ್ಷೆ ಹಾಗೂ ಸಪ್ಟೆಂಬರ್ 29 ರಂದು ಪ್ರಥಮ, ದ್ವಿತೀಯ, ತೃತೀಯ ಭಾಷೆಗಳ ಪರೀಕ್ಷೆ ಇರಲಿದೆ.