ಬೆಂಗಳೂರು, ಆ.19 (DaijiworldNews/HR): ಕರ್ನಾಟಕದ ವಕ್ಫ್ ಆಸ್ತಿ ಕಬಳಿಕೆ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ವಕ್ಫ್ ಮತ್ತು ಹಜ್ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
ವಿಕಾಸಸೌಧದಲ್ಲಿ ವಕ್ಫ್ ಮತ್ತು ಹಜ್ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಸಚಿವರು ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಜರಾಯಿ ಹಾಗೂ ಹಜ್ ಮತ್ತು ವಕ್ಫ್ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ್ದು, ರಾಜ್ಯದಲ್ಲಿ ವಕ್ಫ್ 105885 ಎಕರೆ ಜಮೀನು ಗುರುತಿಸಲಾಗಿದೆ. ರಾಜ್ಯದಲ್ಲಿ ಒಟ್ಟು 32192 ವಕ್ಫ್ ಆಸ್ತಿ ನೊಂದಣಿಯಾಗಿದೆ. 8480 ಎಕರೆ ಒತ್ತುವರಿಯಾಗಿರುವ ಮಾಹಿತಿ ಇದೆ. ಈ ಬಗ್ಗೆ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಆದಷ್ಟು ಶೀಘ್ರ ಈ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಕ್ರಮ ಕೈಗೊಳ್ಳಲಾಗುವುದು" ಎಂದರು.
ಇನ್ನು ರಾಜ್ಯದ 149 ತಾಲೂಕುಗಳ ವಕ್ಫ್ ಆಸ್ತಿ ಗೆಜೆಟ್ ಹೊರಡಿಸಲಾಗಿದ್ದು, ವಕ್ಫ್ ಇಲಾಖೆಯಲ್ಲಿ 355 ಸಿಬ್ಬಂದಿ ಇದ್ದು ಇನ್ನು 84 ಹುದ್ದೆಗಳು ಖಾಲಿ ಇವೆ. ಖಾಲಿ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಲಾಗುವುದು" ಎಂದು ತಿಳಿಸಿದ್ದಾರೆ.
ಹಜ್ ಯಾತ್ರೆಗೆ ಪ್ರತಿ ವರ್ಷ ಹೋಗಲು ಅವಕಾಶ ದ್ದು, ಸೌದಿ ಅರೇಬಿಯಾಕ್ಕೆ ಹೋಗಲು ಬೇಕಾದ ಅವಶ್ಯ ಮಾಹಿತಿಯನ್ನು ಹಜ್ ಮಂಡಳಿ ಮಾಡುತ್ತದೆ. 1965 ರಲ್ಲಿ 8 ಜನ ಸದಸ್ಯರನ್ನೊಳಗೊಂಡ ಹಜ್ ಸಮಿತಿ ರಚನೆಯಾಗಿದೆ" ಎಂದು ಮಾಹಿತಿ ನೀಡಿದ್ದಾರೆ.