ನವದೆಹಲಿ, ಆ 19 (DaijiworldNews/MS): ಸೆಪ್ಟೆಂಬರ್ ನಿಂದ ಮಕ್ಕಳಿಗೆ ಕೋವಿಡ್ ಲಸಿಕೆ ಸಿಗುವ ಸಾಧ್ಯತೆ ಇದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR)ಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಯ ನಿರ್ದೇಶಕಿ ಪ್ರಿಯಾ ಅಬ್ರಹಂ ಹೇಳಿದ್ದಾರೆ.
ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಒಟಿಟಿ ವೇದಿಕೆಯಾದ ಇಂಡಿಯನ್ ಸೈನ್ಸ್ ಗೆ ನೀಡಿದ ಸಂದರ್ಶನದಲ್ಲಿ, ಪ್ರಿಯಾ ಅವರು 2 ರಿಂದ 18 ವರ್ಷ ವಯಸ್ಸಿನವರಿಗೆ ಕೊವಿಡ್ 19 ಲಸಿಕೆ ನೀಡುವ ಸಂಬಂಧ ಸದ್ಯ 2 ಮತ್ತು 3ನೇ ಹಂತದ ಕ್ಲಿನಿಕಲ್ ಪ್ರಯೋಗ ನಡೆಯುತ್ತಿದ್ದು, ಅದು ಸಂಪೂರ್ಣಗೊಂಡ ನಂತರ ಸೆಪ್ಟೆಂಬರ್ನಿಂದ ಮಕ್ಕಳಿಗೂ ಲಸಿಕೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಈ ಲಸಿಕಾ ಪ್ರಯೋಗದ ಆಶಾದಾಯಕವಾಗಿ ಫಲಿತಾಂಶಗಳು ಶೀಘ್ರದಲ್ಲೇ ಲಭ್ಯವಾಗಲಿದೆ.ಅವುಗಳನ್ನು ನಿಯಂತ್ರಕರಿಗೆ ನೀಡಲಾಗುವುದು. ಬಹುಶಃ ಸೆಪ್ಟೆಂಬರ್ ಅಥವಾ ಸೆಪ್ಟೆಂಬರ್ ಬಳಿಕ , ನಾವು ಮಕ್ಕಳಿಗೆ ಲಸಿಕೆ ನೀಡಬಹುದು. ಅದು ಕೊವಾಕ್ಸಿನ್ ಆಗಿರಬಹುದು ಎಂದು ಪ್ರಿಯಾ ಅಬ್ರಹಂ ಹೇಳಿದರು.
ಮಕ್ಕಳ ಮೇಲಿನ ಲಸಿಕಾ ಪ್ರಯೋಗ ಕಾರ್ಯದಲ್ಲಿ ಝೈಡಸ್ ಕ್ಯಾಡಿಲಾ ಲಸಿಕೆ ಪ್ರಯೋಗಗಳು ನಡೆಯುತ್ತಿವೆ. ಆ ಲಸಿಕೆಗಳು ಸಹ ಲಭ್ಯವಾಗಬಹುದು ಎಂದು ಅವರು ಹೇಳಿದರು.
ಕಳೆದ ತಿಂಗಳು ಏಮ್ಸ್ ನಿರ್ದೇಶಕ ರಣದೀಪ್ ಗುಲೇರಿಯಾ ಕೂಡ ಸೆಪ್ಟೆಂಬರ್ ಅಷ್ಟೊತ್ತಿಗೆ ಮಕ್ಕಳಿಗೂ ಲಸಿಕೆ ನೀಡಲಾಗುತ್ತದೆ. ಭಾರತ್ ಬಯೋಟೆಕ್ನ ಕೊವ್ಯಾಕ್ಸಿನ್ ಲಸಿಕೆಯನ್ನು ಮಕ್ಕಳ ಮೇಲೆ ಪ್ರಯೋಗ ಮಾಡಲಾಗುತ್ತಿದೆ. ಸೆಪ್ಟೆಂಬರ್ನಲ್ಲಿ ಫಲಿತಾಂಶ ಹೊರಬೀಳಲಿದೆ ಎಂದು ಹೇಳಿದ್ದರು.