ಬೆಂಗಳೂರು, ಆ 19 (DaijiworldNews/MS): ಸೆಪ್ಟೆಂಬರ್ 13ರಿಂದ ಸೆಪ್ಟೆಂಬರ್ 24ರವರೆಗೆ ವಿಧಾನಮಂಡಲ ಅಧಿವೇಶನ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ .ಸಿ ಮಾಧುಸ್ವಾಮಿ ತಿಳಿಸಿದ್ದಾರೆ.
ನೂತನ ಸಚಿವರಿಗೆ ಖಾತೆ ಹಂಚಿಕೆಯಾದ ಬಳಿಕ ಗುರುವಾರ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆಯಿತು. ವಿಧಾನಸೌಧದಲ್ಲಿಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ವೇಳೆ ವಿಧಾನ ಮಂಡಲ ಅಧಿವೇಶನ ದಿನಾಂಕ ನಿಗದಿ ಮಾಡಲಾಯಿತು. ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಸಭೆಯ ವಿವರಗಳನ್ನು ಜೆ.ಸಿ ಮಾಧುಸ್ವಾಮಿ ಅವರು ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದರು.
ನೂತನ ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದ ಸರ್ಕಾರದ ವಿಧಾನಮಂಡಲ ಅಧಿವೇಶನ ನಡೆಸುವ ಕುರಿತು ಇವತ್ತು ನಡೇದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸೆ 13ರಿಂದ ಸೆ. 24ರವರೆಗೆ 10 ದಿನಗಳ ಕಾಲ ಅಧಿವೇಶನ ಬೆಂಗಳೂರಿನ ವಿಧಾನಸೌಧದಲ್ಲಿಯೇ ನಡೆಯಲಿದೆ ಎಂದು ಸಚಿವ ಮಾಧುಸ್ವಾಮಿ ಹೇಳಿದರು