ನವದೆಹಲಿ,ಆ 19 (DaijiworldNews/MS): ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಗುರುವಾರ ಸೇನಾ ಆಸ್ಪತ್ರೆಯಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ರಾಷ್ಟ್ರಪತಿ ಭವನದ ಹೇಳಿಕೆಯಲ್ಲಿ ತಿಳಿಸಲಾಗಿದೆ. ಸಧ್ಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
"ಭಾರತದ ರಾಷ್ಟ್ರಪತಿ ಶ್ರೀ ರಾಮನಾಥ ಕೋವಿಂದ್ (75 ವರ್ಷ) ಅವರು ಇಂದು ಬೆಳಿಗ್ಗೆ (ಆಗಸ್ಟ್ 19, 2021) ನವದೆಹಲಿಯ ಸೇನಾ ಆಸ್ಪತ್ರೆಯಲ್ಲಿ (ರೆಫರಲ್ & ರಿಸರ್ಚ್) ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾದರು. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಮತ್ತು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ" ಎಂದು ರಾಷ್ಟ್ರಪತಿಗಳ ಪತ್ರಿಕಾ ಕಾರ್ಯದರ್ಶಿ ಅಜಯ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ