ನವದೆಹಲಿ, ಆ.19 (DaijiworldNews/HR): ಅಕ್ರಮ ಗಣಿ ಪ್ರಕರಣದಲ್ಲಿ ಬಳ್ಳಾರಿಗೆ ತೆರಳದಂತೆ ಆದೇಶ ಕೋರಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠವು ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಬಳ್ಳಾರಿಗೆ ತೆರಳಲು ಷರತ್ತುಬದ್ಧ ಅನುಮತಿ ನೀಡಿದೆ.
ಸುಪ್ರೀಂ ಕೋರ್ಟ್ ಜನಾರ್ಧನ ರೆಡ್ಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಇಂದು ನಡೆಸಿದ್ದು, ನ್ಯಾಯಮೂರ್ತಿ ವಿನೀತ್ ಶರಣ್ ಅವರಿದ್ಧಂತ ನ್ಯಾಯಪೀಠವು, ಬಳ್ಳಾರಿಗೆ ಹೋದಾಗಲೆಲ್ಲಾ ಎಸ್ಪಿಗೆ ಮಾಹಿತಿ ನೀಡುವಂತೆ ಷರತ್ತು ವಿಧಿಸಿ, ಬಳ್ಳಾರಿಗೆ ತೆರಳೋದಕ್ಕೆ ಅನುಮತಿಸಿದೆ.
ಇನ್ನು ಅಕ್ರಮ ಗಣಿ ಪ್ರಕರಣದಲ್ಲಿ ಜನಾರ್ಧನ ರೆಡ್ಡಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದ್ದು, ಬಳ್ಳಾರಿಗೆ ತೆರಳದಂತೆ ಷರತ್ತು ವಿಧಿಸಿತ್ತು. ಈ ಕುರಿತು ಮತ್ತೆ ಪರಿಶೀಲಿಸುವಂತೆ ಕೋರಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ಇಂದು ನಡೆಸಿದ್ದು, ಈ ಅನುಮತಿ ನೀಡಿದೆ.