ಬೆಂಗಳೂರು, ಆ.19 (DaijiworldNews/HR): ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಆಗಸ್ಟ್11ರಂದು ಸುಪ್ರೀಂ ಕೋರ್ಟ್ ನಿಂದ ಷರತ್ತು ಬದ್ಧ ಜಾಮೀನು ನೀಡಿತ್ತು. ಇಂದು ಸಾಕ್ಷ್ಯ ನಾಶ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿದೆ.
ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಆಗಸ್ಟ್ 11ರಂದು ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣ ಸಂಬಂಧ, ಜಾಮೀನು ಅರ್ಜಿ ನೀಡಲಾಗಿತ್ತು. ಆದರೆ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಸಾಕ್ಷ್ಯ ನಾಶ ಪ್ರಕರಣ ಸಂಬಂಧ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ಬಾಕಿ ಇತ್ತು.
ಇನ್ನು ಗುರುವಾರ ಈ ಸಂಬಂಧ ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಸಾಕ್ಷ್ಯ ನಾಶ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿದ್ದು, ಇಂದು ಅಥವಾ ನಾಳೆ ಮಾಜಿ ಸಚಿವ ವಿನಯ್ ಕುಲಕರ್ಣಿ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.