ಶ್ರೀನಗರ, ಆ 20 (DaijiworldNews/PY): ಶುಕ್ರವಾರ ಬೆಳಗ್ಗೆ ಜಮ್ಮು-ಕಾಶ್ಮೀರದ ಆವಂತಿಪುರ ಬಳಿಯ ಪಾಂಪೋರ್ ಪ್ರದೇಶದಲ್ಲಿ ನಡೆದ ಎನ್ಕೌಂಟರ್ನಲ್ಲಿ ಓರ್ವ ಉಗ್ರ ಸಾವನ್ನಪ್ಪಿದ್ದಾನೆ.
ಪ್ರಾತಿನಿಧಿಕ ಚಿತ್ರ
ಪಾಂಪೋರ್ ಜಿಲ್ಲೆಯಲ್ಲಿ ಉಗ್ರರು ಇರುವ ಮಾಹಿತಿ ಆಧರಿಸಿ ಭದ್ರತಾ ಪಡೆ ಶೋಧ ಕಾರ್ಯಾಚರಣೆ ಪ್ರಾರಂಭಿಸಿತ್ತು. ಈ ಸಂಧರ್ಭ ಉಗ್ರರ ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ಉಗ್ರ ಹತನಾಗಿದ್ದಾನೆ.
ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಇನ್ನಷ್ಟು ಮಾಹಿತಿ ಬರಬೇಕಿದೆ.
ಸ್ವಾತಂತ್ರ್ಯ ದಿನಾಚರಣೆಯ ಎರಡು ದಿನಗಳ ಹಿಂದೆ ಕುಲ್ಗಾಂನಲ್ಲಿ ಎನ್ಕೌಂಟರ್ನಲ್ಲಿ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕನನ್ನು ಸದೆಬಡಿಯಲಾಗಿತ್ತು.