ಲಖನೌ, ಆ.20 (DaijiworldNews/HR): ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ ಎಂದು ಸಂಜಯ್ ಗಾಂಧಿ ವೈದ್ಯಕೀಯ ವಿಜ್ಞಾನಗಳ ಸ್ನಾತಕೋತ್ತರ ಸಂಸ್ಥೆ ಆಸ್ಪತ್ರೆಯ ನಿರ್ದೇಶಕ, ಪ್ರೊ ಆರ್.ಕೆ. ಧಿಮನ್ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಧಿಮನ್, "ಕಲ್ಯಾಣ್ ಸಿಂಗ್ ಅವರ ರಕ್ತದೊತ್ತಡ ಕಡಿಮೆಯಾಗಿದ್ದು, ಮೂತ್ರ ವಿಸರ್ಜಿಸಲೂ ಅವರಿಗೆ ಸಾಧ್ಯವಾಗುತ್ತಿಲ್ಲ. ಅವರನ್ನು ಡಯಾಲಿಸಿಸ್ಗೆ ಒಳಪಡಿಸಲಾಗಿದೆ" ಎಂದರು.
ಇನ್ನು ಕಲ್ಯಾಣ್ ಸಿಂಗ್ ಅವರನ್ನು ಸೋಂಕು ಮತ್ತಿತರ ಆರೋಗ್ಯ ಸಮಸ್ಯೆಯಿಂದಾಗಿ ಜುಲೈ 4ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮೊದಲು ರಾಮ ಮನೋಹರ್ ಲೋಹಿಯಾ ವೈದ್ಯ ವಿಜ್ಞಾನಗಳ ಸಂಸ್ಥೆ ಆಸ್ಪತ್ರೆಗೆ ದಾಖಲಾಗಿದ್ದ ಕಲ್ಯಾಣ್ ಸಿಂಗ್ ಅವರನ್ನು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಸಂಜಯ್ ಗಾಂಧಿ ವೈದ್ಯಕೀಯ ವಿಜ್ಞಾನಗಳ ಸ್ನಾತಕೋತ್ತರ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.