ಮೈಸೂರು, ಆ.20 (DaijiworldNews/HR): ಐಎಎಸ್, ಐಪಿಎಸ್ ಅಧಿಕಾರಿಗಳ ಫ್ಯಾನ್ಸ್ ಪೇಜ್ ನಿಷೇಧಿಸಿ ಎಂದು ಪ್ರತಾಪ್ ಸಿಂಹ ಅವರು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿಗೆ ಮನವಿ ಮಾಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಐಎಎಸ್, ಐಪಿಎಸ್ ಕೆಲವು ಅಧಿಕಾರಿಗಳು ಏನೂ ಕೆಲಸ ಮಾಡದಿದ್ದರೂ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಗಿ ಬಿಂಬಿಸಿಕೊಳ್ಳುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು. ಅಧಿಕಾರಿಗಳು ಮಾಡಿದ ಕೆಲಸಗಳನ್ನ ಜಿಲ್ಲೆಯಿಂದ ಒಂದು ಅಕೌಂಟ್ ತೆರೆದು ಅದರಲ್ಲಿ ಮಾಹಿತಿ ಹಾಕಲಿ. ಫ್ಯಾನ್ಸ್ ಫೇಜ್ಗಳಿಂದ ಹೊಗಳಿಕೆಗಳು ಸೃಷ್ಟಿಯಾಗಿವೆ" ಎಂದಿದ್ದಾರೆ.
ಇನ್ನು ಯಾರೋ ಒಬ್ಬ ಲಾಠಿ ಹಿಡಿದು ಓಡಾಡಿದರೆ ಹಾಗೇ, ಹೀಗೆ ಅಂತ ಬಿಂಬಿಸಲಾಗುತ್ತಿದೆ. ಐಎಎಸ್, ಐಪಿಎಸ್ ಅಧಿಕಾರಿಗಳು ಉತ್ತಮ ಕೆಲಸಗಳನ್ನು ಮಾಡಬೇಕು" ಎಂದು ಹೇಳಿದ್ದಾರೆ.