ಶ್ರೀನಗರ, ಆ 21 (DaijiworldNews/PY): ಜಮ್ಮು-ಕಾಶ್ಮೀರದಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಭಾರತೀಯ ಭದ್ರತಾ ಪಡೆ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಉಗ್ರರು ಸಾವನ್ನಪ್ಪಿದ್ದಾರೆ.
ಅವಂತಿಪೋರಾದ ನಾಗಬರೇನ್ ಟ್ರಾಲ್ನಲ್ಲಿ ಜೈಶ್-ಇ-ಮೊಹಮ್ಮದ್ ಸಂಘಟನೆಗೆ ಸೇರಿದ ಮೂವರು ಉಗ್ರರನ್ನು ಭಾರತೀಯ ಭದ್ರತಾ ಪಡೆಗಳು ಸದೆಬಡಿದಿದ್ದು, ಉಗ್ರರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ರಕ್ಷಣಾ ಪಡೆಗಳು ವಶಕ್ಕೆ ಪಡೆದುಕೊಂಡಿವೆ.
ಸ್ಥಳದಲ್ಲಿ ಕಾಶ್ಮೀರದ ಪೊಲೀಸರು ಹಾಗೂ ಭಾರತೀಯ ಸೇನಾಪಡೆಗಳು ಜಂಟಿಯಾಗಿ ಭಯೋತ್ಪಾದಕರ ವಿರುದ್ದ ಕಾರ್ಯಾಚರಣೆ ನಡೆಸಿದ್ದಾರೆ.
ಸಾವನ್ನಪ್ಪಿದ್ದ ಮೂವರು ಉಗ್ರರು ಜೈಷ್-ಇ-ಮೊಹಮ್ಮದ್ ಸಂಘಟನೆಗೆ ಸೇರಿದವರಗಿದ್ದು, ಇದರಲ್ಲಿ ಇಬ್ಬರು ಉಗ್ರ ಜುಲೈ 23ರಂದು ಕಾಶ್ಮೀರದ ಸರ್ಕಾರಿ ಹೈಸ್ಕೂಲ್ ಜವಾನನ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.