ಕಲಬುರಗಿ, . 21 (DaijiworldNews/HR): ಉಳಿದಿರುವ ನಾಲ್ಕು ಸಚಿವ ಸ್ಥಾನಗಳ ಭರ್ತಿ ಮೂಲಕ ಕೆಲವೇ ದಿನಗಳಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಉಳಿದಿರುವ ನಾಲ್ಕು ಸ್ಥಾನಗಳಿಗೆ ಪ್ರವರ್ಗ ಅವಲೋಕಿಸಿ ಅವಕಾಶ ಕಲ್ಪಿಸಲಾಗುತ್ತದೆ. ನಾಲ್ಕು ಸಚಿವ ಸ್ಥಾನಗಳಲ್ಲಿ ಒಂದು ಸ್ಥಾನ ಕಲಬುರಗಿಗೆ ಸಿಗುವ ಸಾಧ್ಯತೆ ಇದೆ" ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇನ್ನು ಎಲ್ಲವನ್ನು ಅಳೆದು ತೂಗಿ ಕೆಲ ಇತಿ ಮಿತಿಗಳೊಂದಿಗೆ ಸ್ಥಾನಗಳನ್ನು ಕಲ್ಪಿಸಲಾಗಿದ್ದು, ಆದರೂ ಎಲ್ಲರಿಗೂ ಅವಕಾಶ ಸಿಗುವುದು ಕಷ್ಟ. ಏನೇಯಾದರೂ ಕೆಲವೇ ದಿನಗಳಲ್ಲಿ ಸಂಪುಟ ವಿಸ್ತರಣೆ ಗೊಳ್ಳಲಿದೆ ಎಂದು ಹೇಳಿದ್ದಾರೆ.
ಈಗ ನಡೆಯುತ್ತಿರುವ ಕಲಬುರಗಿ, ಬೆಳಗಾವಿ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಹೊಂದಿ ಅಧಿಕಾರಕ್ಕೆ ಬರಲಿದ್ದು, ಈಗಾಗಲೇ ಪಕ್ಷದ ಉಸ್ತುವಾರಿ ಹಾಗೂ ಕೋರ್ ಕಮಿಟಿ ಸದಸ್ಯರು ಸಭೆ ನಡೆಸಿ ಸ್ಪರ್ಧಾ ಅಭ್ಯರ್ಥಿಗಳ ಪಟ್ಟಿ ಅಂತೀಮಗೊಳಿಸಿದ್ದು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸಾಧನೆಗಳನ್ನು ಅವಲೋಕಿಸಿ ಹಿಂದಿನ ಚುನಾವಣೆಗಳಂತೆ ಪಾಲಿಕೆ ಚುನಾವಣೆ ಯಲ್ಲೂ ಜನಾಶೀರ್ವಾದ ಮಾಡಲಿದ್ದಾರೆ ಎಂದಿದ್ದಾರೆ.