ಬೆಂಗಳೂರುಆ 21 (DaijiworldNews/MS): ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದ ಹಿನ್ನೆಲೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರು ಆ.21ರ ಶನಿವಾರ ವಿಚಾರಣೆಗಾಗಿ ದೆಹಲಿಗೆ ತೆರಳಿದ್ದಾರೆ.
ಆಗಸ್ಟ್ 5ರಂದು ಜಮೀರ್ ಅಹ್ಮದ್ ಖಾನ್ ಮನೆ ಮೇಲೆ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯ ಆಸ್ತಿಗೆ ಸಂಬಂಧಿಸಿದಂತೆ ಪೂರಕ ದಾಖಲೆಗಳನ್ನು ಸಲ್ಲಿಸುವಂತೆ ಸಮಯಾವಕಾಶ ನೀಡಿತ್ತು. ಇಡಿ ನೀಡಿದ ಸಮಯ ಅಂತ್ಯವಾಗಿದ್ದರಿಂದ ವಿಚಾರಣೆಗಾಗಿಯೇ ಜಮೀರ್ ಅಹ್ಮದ್ ಖಾನ್ ದೆಹಲಿ ಹೋಗಿದ್ದಾರೆ ಎನ್ನಲಾಗಿದೆ.
ಇನ್ನು ಜಾರಿ ನಿರ್ದೇಶನಾಲಯದಿಂದ ನೋಟಿಸ್ ವಿಚಾರವಾಗಿಯೇ ಶುಕ್ರವಾರ ತಡರಾತ್ರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದ ಜಮೀರ್ ಅಹ್ಮದ್, ಚರ್ಚೆ ನಡೆಸಿದ್ದರು. ಇಡಿ ವಿಚಾರಣೆ ಎದುರಿಸುವ ನಿಟ್ಟಿನಲ್ಲಿ ಜಮೀರ್ ಚರ್ಚಿಸಿದ್ದಾರೆ ಎನ್ನಲಾಗಿದೆ.