ಗುವಾಹಟಿ, 21 (DaijiworldNews/HR): ತಾಲಿಬಾನ್ ಬೆಂಬಲಿಸುವಂತಹ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ಆರೋಪದ ಮೇಲೆ ಅಸ್ಸಾಂನಾದ್ಯಂತ 14 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಸಾಂಧರ್ಭಿಕ ಚಿತ್ರ
ತಾಲಿಬಾನ್ ಬೆಂಬಲಿಸುವಂತಹ ಸಂದೇಶಗಳನ್ನು ಹಂಚಿಕೊಂಡಿದ್ದ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಮರೂಪ್ ಮೆಟ್ರೋಪಾಲಿಟನ್, ಬರ್ಪೇಟಾ, ಧುಬ್ರಿ ಮತ್ತು ಕರಿಮಗಂಜ್ ಜಿಲ್ಲೆಗಳಿಂದ ತಲಾ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಈ ರೀತಿಯ ಸಂದೇಶ ಹಾಕಿದವರನ್ನು ಪತ್ತೆ ಮಾಡಿ, ಶುಕ್ರವಾರ ರಾತ್ರಿಯಿಂದ ಬಂಧಿಸಲಾಗುತ್ತಿದೆ. ಅವರ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ(ನಿಯಂತ್ರಣ) ಕಾಯ್ದೆ, ಮಾಹಿತ ತಂತ್ರಜ್ಞಾನ ಕಾಯ್ದೆ ಮತ್ತು ಸಿಆರ್ಪಿಸಿಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಡಿಐಜಿ ವಯೊಲೆಟ್ ಬರೂಹ, "ಸಾಮಾಜಿಕ ಜಾಲತಾಣಗಳಲ್ಲಿ ತಾಲಿಬಾನ್ ಪರ ಪೋಸ್ಟ್ ಹಾಕುವ ಹಾಗೂ ದೇಶದ ಭದ್ರತೆಗೆ ಧಕ್ಕೆ ಉಂಟಾಗುವಂತಹ ಮಾಹಿತಿ ಹಂಚಿಕೊಳ್ಳುವವರ ವಿರುದ್ಧ ಅಸ್ಸಾಂ ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ" ಎಂದು ತಿಳಿಸಿದ್ದಾರೆ.