ನವದೆಹಲಿ, ಆ 22 (DaijiworldNews/PY): ಕಾಬೂಲ್ನಿಂದ 87 ಭಾರತೀಯರು ಸುರಕ್ಷಿತವಾಗಿ ಭಾರತಕ್ಕೆ ವಾಪಾಸ್ಸಾಗಿದ್ದು, ಭಾರತ್ ಮಾತಾ ಕಿ ಜೈ ಎಂಬ ಘೋಷಣೆ ಮೊಳಗಿಸಿದ್ದಾರೆ.
ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದು, "ಏರ್ ಇಂಡಿಯಾ 1956 ವಿಮಾನದಲ್ಲಿ 87 ಭಾರತೀಯರು ತಜಕಿಸ್ತಾನದ ಮೂಲಕ ನವದೆಹಲಿಗೆ ಮರಳುತ್ತಿದ್ದಾರೆ. ಇಬ್ಬರು ನೇಪಾಳಿ ಪ್ರಜೆಗಳು ಈ ವಿಮಾನದಲ್ಲಿದ್ದಾರೆ. ಪ್ರಯಾಣಿಕರನ್ನು ಐಎಎಫ್ ಏರ್ಕ್ರಾಫ್ಟ್ ಮೂಲಕ ಕಾಬೂಲ್ನಿಂದ ಹೊರ ಒಯ್ಯಲಾಯಿತು" ಎಂದು ತಿಳಿಸಿದ್ದಾರೆ.
ಅಫ್ಗಾನಿಸ್ತಾನದಿಂದ ಭಾರತೀಯರನ್ನು ಕರೆತರಲಾಗುತ್ತಿದೆ. ಏರ್ ಇಂಡಿಯಾ 1956 ವಿಮಾನದ ಮೂಲಕ 87 ಭಾರತೀಯರು ತಜಕಿಸ್ತಾನದಿಂದ ನವದೆಹಲಿಗೆ ಹೊರಟಿದ್ದಾರೆ. ಈ ವಿಮಾನದಲ್ಲಿ ಇಬ್ಬರು ನೇಪಾಳಿ ಪ್ರಜೆಗಳು ಇದ್ದಾರೆ. ತಜಕಿಸ್ತಾನದ ದುಶಂಬೆಯಲ್ಲಿರುವ ಭಾರತೀಯ ದೂತವಾಸ ನಿರೀಕ್ಷಿತ ಸಹಾಯ ಹಾಗೂ ಸಲಹೆ ನೀಡಿದರು. ಹೆಚ್ಚಿನ ಸ್ಥಳಾಂತರ ಕಾರ್ಯ ಮುಂದುವರಿದಿದೆ ಎಂದು ಅರಿಂದಮ್ ಬಾಗ್ಚಿ ಹೇಳಿದ್ದಾರೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.