ಲಕ್ನೋ, ಆ 22 (DaijiworldNews/PY): "ನಾವು ಓರ್ವ ಸಮರ್ಥ ನಾಯಕನನ್ನು ಕಳೆದುಕೊಂಡಿದ್ದೇವೆ. ನಾವು ಅವರ ಆದರ್ಶಗಳನ್ನು ಪಾಲಿಸಬೇಕಿದೆ" ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.
ನಿಧನರಾದ ಬಿಜೆಪಿ ನಾಯಕ, ಉತ್ತರಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ, ನಂತರ ಅವರ ಕುಟುಂದವರಿಗೆ ಸಾಂತ್ವಾನ ಹೇಳಿದರು.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಧಾನಿ ಮೋದಿ ಅವರು, "ನಾವು ಓರ್ವ ಸಮರ್ಥ ನಾಯಕನನ್ನು ಕಳೆದುಕೊಂಡಿದ್ದೇವೆ. ಅವರ ಆದರ್ಶಗಳನ್ನು ನಾವು ಪಾಲಿಸಬೇಕು. ಆ ಮೂಲಕ ನಾವು ಅವರಿಗೆ ಗೌರವ ಸಲ್ಲಿಸಬೇಕು. ಅವರ ಕನಸುಗಳನ್ನು ಸಾಕಾರಗೊಳ್ಳುವಂತೆ ಮಾಡಬೇಕು" ಎಂದಿದ್ದಾರೆ.
"ಕಲ್ಯಾಣ್ ಸಿಂಗ್ ಅವರಿಗೆ ಪ್ರಭು ರಾಮನು ತನ್ನ ಚರಣಗಳಲ್ಲಿ ಸ್ಥಾನ ನೀಡಲಿ. ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ತಿಳಿಸಿದ್ದಾರೆ.