ಬೆಂಗಳೂರು, ಆ. 22 (DaijiworldNews/HR): ಕರ್ನಾಟಕದ ನೀರಾವರಿ ವಿಚಾರದಲ್ಲಿ ನಾವು ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನೀರಾವರಿ ವಿಚಾರದಲ್ಲಿ ಒಂದು ವೇಳೆ ಯಾವುದೇ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗದೇ ಇದ್ದರೆ ಜೆಡಿಎಸ್ ಪಕ್ಷ ಹೋರಾಟ ಮಾಡಲಿದೆ. ಕೃಷ್ಣ ತೀರದಿಂದ ಪಾದಯಾತ್ರೆ ಮಾಡುತ್ತೇನೆ" ಎಂದರು.
ಇನ್ನು "ಕೃಷ್ಣ ನದಿ ನೀರು ಹಂಚಿಕೆ ಬಗ್ಗೆ ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದು, ವಿವಾದ ಬಗೆಹರಿಸಿಕೊಳ್ಳುತ್ತೇವೆಂದು ಅವರು ಹೇಳಿರುವುದು ಸಂತಸ ತಂದಿದೆ. ಈ ಬಗ್ಗೆ ಸುಪ್ರೀಂಕೋರ್ಟ್ನಲ್ಲಿ 3 ರಾಜ್ಯಗಳು ಅರ್ಜಿ ಸಲ್ಲಿಸಿದ್ದು, ಈ ಬಗ್ಗೆ ಶರದ್ ಪವಾರ್, ಜೆಡಿಎಸ್ ಮುಖಂಡರ ಜತೆ ಚರ್ಚಿಸುವೆ. ಆಲಮಟ್ಟಿ ವಿಚಾರ ಇಂದು ನಿನ್ನೆಯದಲ್ಲ. ಆಲಮಟ್ಟಿಯಿಂದ ಪಾದಯಾತ್ರೆಗೆ ಜೆಡಿಎಸ್ ನಿರ್ಧರಿಸಿದೆ" ಎಂದ್ದಾರೆ.