ನವದೆಹಲಿ, ಆ. 22 (DaijiworldNews/HR): ಕಾಬೂಲ್ನಿಂದ ಭಾರತೀಯ ವಾಯುಪಡೆ ವಿಮಾನದ ಮೂಲಕ ಭಾರತಕ್ಕೆ ಬಂದ ಅಫ್ಗಾನಿಸ್ತಾನದ ಸಿಖ್ ಸಂಸದ ನರೇಂದರ್ ಸಿಂಗ್ ಖಾಲ್ಸಾ ಭಾವುಕರಾಗಿದ್ದಾರೆ.
ಅಫ್ಗಾನಿಸ್ತಾನದಿಂದ ಬಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕಳೆದ 20 ವರ್ಷಗಳಲ್ಲಿ ಅಫ್ಗಾನಿಸ್ತಾನದಲ್ಲಿ ಸಾಧಿಸಿದ್ದೆಲ್ಲವೂ ಹಾಳಾಗಿಹೋಗದ್ದು, ಈಗ ಶೂನ್ಯ ಆವರಿಸಿದೆ" ಎಂದು ಅವರು ಕಣ್ಣೀರು ಹಾಕಿದರು.
ಇನ್ನು ಇದೇ ವೇಳೆ ಭಾರತ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ, ಭಾರತೀಯ ವಾಯುಪಡೆಗೆ ಕೃತಜ್ಞತೆ ಅರ್ಪಿಸಿದ್ದಾರೆ.
ಅಫ್ಗಾನಿಸ್ತಾನದಲ್ಲಿ ನಿಯೋಜನೆಗೊಂಡಿದ್ದ ತನ್ನ ಭದ್ರತಾ ಪಡೆಗಳನ್ನು ಅಮೇರಿಕಾ ಹಿಂದಕ್ಕೆ ಪಡೆಯುತ್ತಿದ್ದು, ದೇಶದಲ್ಲಿ ಮೇಲುಗೈ ಸಾಧಿಸಿರುವ ತಾಲಿಬಾನ್ ಸರ್ಕಾರವನ್ನು ಉರುಳಿಸಿ, ತನ್ನ ಆಡಳಿತ ಘೋಷಿಸಿಕೊಂಡಿದೆ.