ಬೆಂಗಳೂರು, ಆ.23 (DaijiworldNews/HR): ಕರ್ನಾಟಕದಲ್ಲಿ ಇಂದಿನಿಂದ 9 ರಿಂದ ದ್ವೀತಿಯ ಪಿಯುಸಿ ತರಗತಿಗಳು ಆರಂಭವಾಗುತ್ತಿದ್ದು, ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾದರೆ ರಾಜ್ಯದಲ್ಲಿ ಮತ್ತೆ ಶಾಲೆಗಳನ್ನು ಬಂದ್ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕರ್ನಾಟಕದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಮತ್ತೆ ಹೆಚ್ಚಾದರೆ ಶಾಲೆಗಳನ್ನು ಬಂದ್ ಮಾಡಲಾಗುವುದು. ಸದ್ಯ ಕೊರೊನಾ ಸೋಂಕಿನ ಪ್ರಕರಣಗಳು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳನ್ನು ತೆರೆಯಲಾಗಿದೆ" ಎಂದರು.
ಇನ್ನು "ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಸುಮಾರು ಶೇ. 1 ರಷ್ಟಿದ್ದು, ಕೇರಳ, ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ಕರ್ನಾಟಕದಲ್ಲಿಯೂ ಸೋಂಕು ಹೆಚ್ಚಾದರೆ ಶಾಲೆಗಳನ್ನು ಬಂದ್ ಮಾಡಲಾಗುವುದು. ಸಿಎಂ ಜೊತೆಗೆ ಚರ್ಚೆ ನಡೆಸಿ ಶಾಲೆ ಬಂದ್ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು" ಎಂದು ಹೇಳಿದ್ದಾರೆ.