ಬೆಂಗಳೂರು, ಆ.23 (DaijiworldNews/HR): ಸಿಲಿಂಡರ್ ಸ್ಪೋಟಗೊಂಡ ಪರಿಣಾಮ, ಓರ್ವ ಸಜೀವವಾಗಿ ದಹನವಾಗಿ, ಮತ್ತೋರ್ವನ ಗಂಭೀರ ಸ್ಥಿತಿಯಲ್ಲಿದ್ದು, ಅಲ್ಲದೇ ನಾಲ್ವರು ಗಾಯಗೊಂಡಿರುವ ಘಟನೆ ನಗರ ಮಾಗಡಿ ರಸ್ತೆಯಲ್ಲಿನ ಫ್ಯಾಕ್ಟರಿವೊಂದರಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಸಾಂಧರ್ಭಿಕ ಚಿತ್ರ
ಎಂ.ಎಂ ಪುಡ್ ಪ್ಯಾಕ್ಟರಿಯಲ್ಲಿ ಆರು ಜನರು ಕೆಲಸ ಮಾಡುತ್ತಿದ್ದು, ಈ ವೇಳೆ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ, ಓರ್ವ ಸಜೀವವಾಗಿ ದಹನಗೊಂಡು ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದಲ್ಲದೇ ಇನ್ನೂ ನಾಲ್ವರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ.
ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.