ಲಕ್ನೋ , ಆ 23(DaijiworldNews/MS): ವಿಧಿವಶರಾಗಿರುವ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಅವರ ಸವಿನೆನಪಿಗೆ ಉತ್ತರ ಪ್ರದೇಶದ ಅಯೋಧ್ಯೆ, ಲಕ್ನೋ ಸೇರಿದಂತೆ 6 ಜಿಲ್ಲೆಗಳ ರಸ್ತೆಗಳಿಗೆ ಕಲ್ಯಾಣ್ ಸಿಂಗ್ ಅವರ ಹೆಸರಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಸೋಮವಾರ ಘೋಷಣೆ ಮಾಡಿದ್ದಾರೆ.
ಕಲ್ಯಾಣ್ ಸಿಂಗ್ ಅವರ ಅಂತ್ಯಸಂಸ್ಕಾರ ಸೋಮವಾರ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಕಲ್ಯಾಣ್ ಸಿಂಗ್ ಅವರ ನೆನೆಪಿಗಾಗಿ ಅಲಿಘಢ ವಿಮಾನ ನಿಲ್ದಾಣಕ್ಕೆ ಕಲ್ಯಾಣ್ ಸಿಂಗ್ ಅವರ ಹೆಸರನ್ನಿಡಬೇಕೆಂಬ ಒತ್ತಾಯ ಕೇಳಿಬಂದಿತ್ತು ಆದರೆ ಅಲಿಘಢ ವಿಮಾನ್ ಅನಿಲ್ದಾಣದ ಬದಲಾಗಿ ಕಲ್ಯಾಣ್ ಸಿಂಗ್ ಸ್ಮರಣಾರ್ಥ 6 ಜಿಲ್ಲೆಗಳ ಪ್ರಮುಖ ರಸ್ತೆಗಳಿಗೆ ಹೆಸರನ್ನಿಡಲು ಸರ್ಕಾರ ತೀರ್ಮಾನಿಸಿದೆ.
ಅಯೋಧ್ಯೆಯ ರಾಮಜನ್ಮಭೂಮಿಗೆ ತೆರಳುವ ರಸ್ತೆಗೆ ಕಲ್ಯಾಣ್ ಸಿಂಗ್ ಅವರ ಹೆಸರಿಡಲಾಗುವುದು. ರಾಮ ಮಂದಿರ ನಿರ್ಮಾಣಕ್ಕೆ ಕಲ್ಯಾಣ್ ಸಿಂಗ್ ಅವರೇ ನಮಗೆ ಸ್ಫೂರ್ತಿಯಾಗಿದ್ದಾರೆ. ರಾಮ ಮಂದಿರಕ್ಕಾಗಿ ಅವರ ತ್ಯಾಗ ಎಂದೂ ಮರೆಯಲಾಗದು. ಹೀಗಾಗಿ ಅವರ ನೆನಪಿನಲ್ಲಿ ರಸ್ತೆಗಳಿಗೆ ಅವರ ಹೆಸರನ್ನಿಡಲಾಗುವುದು ಎಂದು ಉತ್ತರ ಪ್ರದೇಶದ ಡಿಸಿಎಂ ತಿಳಿಸಿದ್ದಾರೆ.