ಶಿರಸಿ, ಆ.23 (DaijiworldNews/HR): ಮುಂದಿನ ಹತ್ತು ದಿನದ ಕೊರೊನಾ ಪರಿಸ್ಥಿತಿ ಅವಲೋಕಿಸಿ ಗಣೇಶ ಹಬ್ಬಕ್ಕೆ ಹೊಸ ಮಾರ್ಗಸೂಚಿ ಹೊರಡಿಸುವ ಸಾಧ್ಯತೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಗಣೇಶೊತ್ಸವ ಸಮಿತಿ ಪ್ರಮುಖರ ನಿಯೋಗ ತಮ್ಮನ್ನು ಭೇಟಿ ಮಾಡಿ ಹಬ್ಬದ ಆಚರಣೆಗೆ ಕಠಿಣ ನಿರ್ಬಂಧ ವಿಧಿಸದಂತೆ ಈಗಾಗಲೆ ಹೇಳಿದ್ದು, ಜನರ ಒತ್ತಾಯವನ್ನು ಸರ್ಕಾರಕ್ಕೂ ತಿಳಿಸಲಾಗಿದೆ. ಕೊರೊನಾದ ಮುಂದಿನ ಸ್ಥಿತಿ ಗಮನಿಸಿ ಮುಖ್ಯಮಂತ್ರಿ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ" ಎಂದರು.
ಇನ್ನು ಕೊರೊನಾ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಶಿರಸಿಯಲ್ಲಿ ಕೋವಿಡ್ ಪತ್ತೆ ಪ್ರಯೋಗಾಲಯ ಶೀಘ್ರ ಕಾರ್ಯಾರಂಭಿಸಲಿದೆ. ಶಾಲೆಗಳಲ್ಲಿಯೂ ಕೋವಿಡ್ ನಿಯಮ ಪಾಲಿಸಿ ತರಗತಿ ಆರಂಭಿಸಲಾಗಿದೆ" ಎಮ್ದು ಹೇಳಿದ್ದಾರೆ.