ಬೆಂಗಳೂರು, ಆ. 23 (DaijiworldNews/SM): ರಾಜ್ಯದಲ್ಲಿ ಇಂದು ಒಂಬತ್ತು ಹಾಗೂ ಹತ್ತನೇ ತರಗತಿ ಹಾಗೂ ಪಿಯುಸಿ ತರಗತಿಗಳು ಆರಂಭಿಸಲಾಗಿದೆ. ಈ ನಡುವೆ ಪ್ರಾಥಮಿಕ ಶಾಲೆ ಆರಂಭದ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಶೀಘ್ರದಲ್ಲೇ ಈ ಬಗ್ಗೆ ನಿರ್ಧಾರ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಈಗಾಗಲೇ ಒಂಬತ್ತು ಹಾಗೂ ಹತ್ತನೇ ತರಗತಿ ಆರಂಭಿಸಲಾಗಿದೆ. ಅಲ್ಲದೆ ಪಿಯುಸಿ ತರಗತಿಗಳನ್ನು ಕೂಡ ಆರಂಭಿಸಲಾಗಿದೆ. ಪ್ರಾಥಮಿಕ ಶಾಲೆ ಆರಂಭಿಸುವ ಬಗ್ಗೆ ತಜ್ಞರ ಜೊತೆ ಚರ್ಚಿಸಲಾಗುವುದು. ತಜ್ಞರ ಸಲಹೆಗಳನ್ನು ಸಂಗ್ರಹಿಸಿ ಮುಂದಿನ ನಿರ್ಧಾರ ಶೀಘ್ರದಲ್ಲೇ ತಿಳಿಸಲಾಗುವುದೆಂದು ಅವರು ತಿಳಿಸಿದ್ದಾರೆ.