ಬೆಂಗಳೂರು, ಆ. 24(DaijiworldNews/HR): ಬೆಂಗಳೂರಿನಲ್ಲಿ ಸೋಮವಾರ ನಡೆದಿದ್ದ ಬಾಯ್ಲರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮತ್ತಿಬ್ಬರು ಮೃತಪಟ್ಟಿದ್ದಾರೆ.
ಸಚಿನ್ (40) ಹಾಗೂ ಧನಲಕ್ಷ್ಮಿ (45) ಇಬ್ಬರು ಚಿಕಿತ್ಸೆ ಫಲಿಸದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಂದು ಮೃತಪಟ್ಟಿದ್ದು, ಮತ್ತೊಬ್ಬ ಗಾಯಾಳು ಶಾಂತಿ ಎಂಬಾಕೆಯ ಸ್ಥಿತಿ ತೀರಾ ಗಂಭೀರವಾಗಿದೆ.
ಮಾಗಡಿ ರಸ್ತೆಯ ಗೋಪಾಲಪುರದಲ್ಲಿರುವ ಫುಡ್ ಫ್ಯಾಕ್ಟರಿಯಲ್ಲಿ ಸೋಮವಾರ ಮಧ್ಯಾಹ್ನ ಬಾಯ್ಲರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಸೌರವ್ ಮತ್ತು ಮನೀಶ್ ಎಂಬ ಇಬ್ಬರು ಸಾವನ್ನಪ್ಪಿದ್ದರೆ, ಸಚಿನ್, ಶಾಂತಿ, ಧನಲಕ್ಷ್ಮಿ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದರು. ಇಂದು ರಾಜಸ್ಥಾನ ಮೂಲದ ಸಚಿನ್ ಹಾಗೂ ಸ್ಥಳೀಯರಾದ ಧನಲಕ್ಷ್ಮಿ ಚಿಕಿತ್ಸೆ ಫಲಕಾರಿಯಾಗದೇ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಎಂಎಂ ಫುಡ್ ಕಂಪನಿ ಮಾಲೀಕ ವಿಜಯ್ ಮೆಹ್ತಾ ನಾಪತ್ತೆಯಾಗಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.