ಬೆಂಗಳೂರು, ಆ. 24(DaijiworldNews/HR): ಸೆಪ್ಟೆಂಬರ್ 27 ಮತ್ತು ಸೆಪ್ಟೆಂಬರ್ 29 ರಂದು 2021 ಸಾಲಿನ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಮಾಧ್ಯಮಿಕ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.
ಸಾಂಧರ್ಭಿಕ ಚಿತ್ರ
ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಬರೆಯುವವರು ಸಂಪೂರ್ಣ ವೇಳಾಪಟ್ಟಿಯನ್ನು ಕೆಬಿ ಅಧಿಕೃತ ವೆಬ್ಸೈಟ್ sslc.karnataka.gov.in ನಲ್ಲಿ ಪರಿಶೀಲಿಸಬಹುದು.
ಎರಡು ಪಾಳಿಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದ್ದು, ಸೆಪ್ಟೆಂಬರ್ 27 ರಂದು ಮೊದಲ ಶಿಫ್ಟ್ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ಮತ್ತು ಎರಡನೇ ಶಿಫ್ಟ್ ಮಧ್ಯಾಹ್ನ 2.30 ರಿಂದ ಸಂಜೆ 5 ರವರೆಗೆ. ಜೆಟಿಎಸ್ ಅಭ್ಯರ್ಥಿಗಳಿಗೆ ಪ್ರಾಯೋಗಿಕ ಮತ್ತು ಮೌಖಿಕ ಪರೀಕ್ಷೆಗಳನ್ನು ಸೆಪ್ಟೆಂಬರ್ 30, 2021 ರಂದು ಆಯಾ ಶಾಲೆಗಳಲ್ಲಿ ನಡೆಸಲಾಗುತ್ತದೆ.
ಇನ್ನು ಹಿಂದುಸ್ತಾನಿ ಸಂಗೀತ/ ಕರ್ನಾಟಕ ಸಂಗೀತ ಪ್ರಾಕ್ಟಿಕಲ್ ಪರೀಕ್ಷೆಯನ್ನು ಸೆಪ್ಟೆಂಬರ್ 27 ರಂದು ಮಧ್ಯಾಹ್ನ 2.30 ರಿಂದ 4 ರವರೆಗೆ ಆಯಾ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ.
ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶವನ್ನು ಆಗಸ್ಟ್ 9, 2021 ರಂದು ಘೋಷಿಸಲಾಗಿದ್ದು, ಈ ಬಾರಿ ಒಟ್ಟಾರೆ ಉತ್ತೀರ್ಣ ಶೇಕಡಾ 99.9 ರಷ್ಟಿತ್ತು.