ನವದೆಹಲಿ, ಆ 25 (DaijiworldNews/MS): ಕೋವಿಡ್-19 ಸಾಂಕ್ರಾಮಿಕ ರೋಗದ ಮುನ್ನೆಚ್ಚರಿಕೆಯ ಕ್ರಮವಾಗಿ ಕೇಂದ್ರ ಆರೋಗ್ಯ ಸಚಿವಾಲಯವೂ ಅಫ್ಘಾನಿಸ್ತಾನದಿಂದ ಭಾರತಕ್ಕೆ ಸ್ಥಳಾಂತರಗೊಂಡವರಿಗೆ ಕನಿಷ್ಠ 14 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ ವಾಗಿ ಜಾರಿಗೊಳಿಸಿ ಆದೇಶಿಸಿದೆ.
ಈ ಮಾರ್ಗಸೂಚಿಯು ಅಫ್ಘಾನಿಸ್ತಾನದಿಂದ ಭಾರತಕ್ಕೆ ಆಗಮಿಸುವವರು ಛಾವ್ಲಾ ಕ್ಯಾಂಪ್ಗೆ ಆಗಮಿಸಿದ ದಿನದಿಂದ ಕನಿಷ್ಠ 14 ದಿನಗಳವರೆಗೆ ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇರಲು ಕಡ್ಡಾಯಗೊಳಿಸುತ್ತದೆ.
ಅಫ್ಘಾನಿಸ್ತಾನದ ಪರಿಸ್ಥಿತಿಯನ್ನು ಗಮನಿಸಿದರೆ, ಕಡ್ಡಾಯವಾಗಿ ಪೂರ್ವ-ಬೋರ್ಡಿಂಗ್ ಆರ್ ಟಿ-ಪಿಸಿಟಿಆರ್ ಪರೀಕ್ಷೆಯಿಂದ ವಿನಾಯಿತಿ ನೀಡಿದೆ, ಇದು ಸಾಮಾನ್ಯವಾಗಿ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕಡ್ಡಾಯವಾಗಿದೆ ಎಂದು ಸಚಿವಾಲಯ ಹೇಳಿದೆ.
ವಿಮಾನ ನಿಲ್ದಾಣದಿಂದ ನಜಾಫ್ ಘರ್ ನ ಚಾವ್ಲಾ ಶಿಬಿರಕ್ಕೆ ಪ್ರಯಾಣಿಕರನ್ನು ಸಾಗಿಸಲು ಐಟಿಬಿಪಿ ಅಗತ್ಯ ವ್ಯವಸ್ಥೆ ಮಾಡುತ್ತದೆ. ಪರೀಕ್ಷೆ ವೇಳೆ ಪಾಸಿಟಿವ್ ತಗುಲಿರುವುದು ಧೃಡವಾದರೆ ಕೋವಿಡ್ ಕೇರ್ ಸೆಂಟರ್ ಅಥವಾ ದೆಹಲಿಯ ಎನ್ ಸಿಟಿಯ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಬೇಕು ಎಂದು ಕೇಂದ್ರ ಸಚಿವಾಲಯ ತಿಳಿಸಿದೆ.