ಬೆಂಗಳೂರು, ಆ 25 (DaijiworldNews/PY): ಸಾರಿಗೆ ನೌಕರರ ಮುಷ್ಕರದಲ್ಲಿ ಪಾಲ್ಗೊಂಡಿದ್ದ ಕೆಲವು ಸಾರಿಗೆ ನೌಕರರ ವಜಾ ಹಿನ್ನೆಲೆ ವಜಾ ಆದೇಶವನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.
ಸಾಂದರ್ಭಿಕ ಚಿತ್ರ
ಸಾರಿಗೆ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ್ ನೇತೃತ್ವದಲ್ಲಿ ಆರ್ಟಿ ನಗರದ ನಿವಾಸದಲ್ಲಿ ಸಿಎಂ ಅವರನ್ನು ಭೇಟಿಯಾಗಿದ್ದು, ಸಾರಿಗೆ ನೌಕರರ ಮುಷ್ಕರದ ಸಂದರ್ಭ ವಜಾಗೊಂಡಿದ್ದ ನೌಕರರನ್ನು ಪುನಃ ಕೆಲಸಕ್ಕೆ ಸೇರಿಸಿಕೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು. ಇದರೊಂದಿಗೆ ಜುಲೈ ತಿಂಗಳ ವೇತನ ಬಿಡುಗಡೆಗೂ ಮನವಿ ನೀಡಲಾಗಿದೆ.
ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕಳೆದ ಎಪ್ರಿಲ್ನಲ್ಲಿ ಸಾರಿಗೆ ನೌಕರರು ಮುಷ್ಕರ ಮಾಡಿದ್ದ ಹಿನ್ನೆಲೆ ಸಾರಿಗೆ ಇಲಾಖೆಯು 2,109 ಸಾರಿಗೆ ನೌಕರರನ್ನು ವಜಾ ಮಾಡಿದ್ದು, 500ಕ್ಕೂ ಅಧಿಕ ನೌಕರರನ್ನು ದೂರ ಸ್ಥಳಗಳಿಗೆ ವರ್ಗಾವಣೆ ಮಾಡಿತ್ತು.